ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ

Congress leaders from Sagar and Hosanagar have urged the Karnataka government to induct MLA Gopalakrishna Belur into the state cabinet, citing his seniority, leadership, and contribution to Malnad region development.

ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಹಿರಿತನದ ಆಧಾರದಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಸಾಗರ ಹಾಗೂ ಹೊಸನಗರ ಭಾಗದ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್, ಗೋಪಾಲಕೃಷ್ಣ ಬೇಳೂರು ಅವರು ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸಣ್ಣ ರೈತ ಕುಟುಂಬದಿಂದ ಬಂದ ಹಿಂದುಳಿದ ವರ್ಗದ ನಾಯಕರಾಗಿದ್ದಾರೆ ಎಂದು ಹೇಳಿದರು.

ಸಾಗರ ಮತ್ತು ಹೊಸನಗರ ತಾಲೂಕುಗಳನ್ನು ಒಳಗೊಂಡಿರುವ ವಿಶಾಲ ವಿಧಾನಸಭಾ ಕ್ಷೇತ್ರದಲ್ಲಿ ಅವರು ಜನಪರ ಆಡಳಿತ ನಡೆಸುತ್ತಿದ್ದು, ಅಭಿವೃದ್ಧಿಯ ಹರಿಕಾರರಾಗಿ ಜನಮನ್ನಣೆ ಗಳಿಸಿದ್ದಾರೆ. ಕ್ಷೇತ್ರದ ದುರ್ಬಲ ವರ್ಗಗಳ ಸಮಸ್ಯೆಗಳಿಗೆ ಸ್ಪಂದಿಸಿ ವೈಯಕ್ತಿಕ ಮಟ್ಟದಲ್ಲಿಯೂ ಸಹಾಯ ಮಾಡುತ್ತಾ ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯನ್ನು ಎದುರಿಸಲು ಸಮರ್ಥ ನಾಯಕತ್ವದ ಅಗತ್ಯವಿದೆ. ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಜಿಲ್ಲೆಯನ್ನು ಮರುಸ್ಥಾಪಿಸಲು ಬೇಳೂರು ಅವರ ನಾಯಕತ್ವ ಅವಶ್ಯಕವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಲೆನಾಡು ಭಾಗದ ಅರಣ್ಯ ಹಕ್ಕು ಸಮಸ್ಯೆಗಳು, ಶರಾವತಿ ಮುಳುಗಡೆ ಸಂತ್ರಸ್ತ ರೈತರ ಹಿತಾಸಕ್ತಿಗಳ ರಕ್ಷಣೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅನುದಾನಗಳನ್ನು ತರಲು ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಕಳೆದ ಮೂರು ವರ್ಷಗಳಿಂದ ಯಶಸ್ವಿಯಾಗಿ ಆಡಳಿತ ನಡೆಸಿರುವುದನ್ನು ಉಲ್ಲೇಖಿಸಿದ ಜಯಂತ್, ಪಕ್ಷದ ಹಿತದೃಷ್ಟಿಯಿಂದ ಉಳಿದ ಅವಧಿಗೆ ಗೋಪಾಲಕೃಷ್ಣ ಬೇಳೂರು ಅವರನ್ನು ಸಚಿವ ಸಂಪುಟಕ್ಕೆ ಸೇರಿಸಬೇಕು ಎಂದು ಹೇಳಿದರು. ಇಬ್ಬರೂ ನಾಯಕರು ಪಕ್ಷ ಹಾಗೂ ಆಡಳಿತವನ್ನು ಸಮರ್ಥವಾಗಿ ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದು, 2028ರ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನೆರವಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡಿರುವುದನ್ನು ಸ್ವಾಗತಿಸಿದ ಅವರು, ಅವರ ಅನುಭವದಿಂದ ಪಕ್ಷಕ್ಕೆ ಮತ್ತಷ್ಟು ಬಲ ಸಿಗಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಿತಾ, ತಾಪಂ ಮಾಜಿ ಸದಸ್ಯ ಸೋಮಶೇಖರ ಲ್ಯಾವಿಗೆರೆ, ಗಿರೀಶ್ ಕೋವಿ, ಈಶ್ವರಪ್ಪ ಗೌಡ್ರು, ಗಣಪತಿ ಮಂಡಗಲ್ಲೆ, ಅಶೋಕ್ ಬೇಳೂರು, ತುಮರಿ ಸತ್ಯನಾರಾಯಣ, ಪ್ರಭಾವತಿ, ರವಿ ಹಾಗೂ ವೀರೇಶ ಗೌಡ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

49 minutes ago

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ

ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…

13 hours ago

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ

ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ​ಮಾನವೀಯತೆಯೆಂಬುದು ಕೇವಲ…

14 hours ago

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ – ಶಾಸಕ ಬೇಳೂರು ಗೋಪಾಲಕೃಷ್ಣ

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…

14 hours ago

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ. ಭಾನುಪ್ರಕಾಶ್ ಕರೆ

ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…

16 hours ago

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…

19 hours ago