POSTMAN NEWS

ನೈಜ ಸುದ್ದಿ ನೇರ ಬಿತ್ತರ..

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

GridArt 20260601

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death.

ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಮಧ್ಯರಾತ್ರಿ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತಟ್ಟೆಕೊಡ್ಲು ಗ್ರಾಮದ ನಿವಾಸಿ ರಾಮಚಂದ್ರ ಭಟ್ (85) ಮೃತ ದುರ್ದೈವಿ.

ಭಾನುವಾರ ಮಧ್ಯರಾತ್ರಿ ತಮ್ಮ ಬಳಿಯಿದ್ದ ಸಿಂಗಲ್ ಬ್ಯಾರಲ್ ಗನ್‌ನಿಂದ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಅವರ ತಲೆ ಸಂಪೂರ್ಣವಾಗಿ ಛಿದ್ರಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸೋಕೋ (SOCO) ತಂಡವೂ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುವ ನಿರೀಕ್ಷೆಯಿದೆ.

ಮೃತರು ಬಳಸಿದ ಸಿಂಗಲ್ ಬ್ಯಾರಲ್ ಗನ್‌ಗೆ ಮಾನ್ಯ ಲೈಸೆನ್ಸ್ ಇತ್ತೇ ಎಂಬುದು ಸೇರಿದಂತೆ, ವಯೋಸಹಜ ಅಶಕ್ತತೆಯ ನಡುವೆಯೂ ಅವರು ಗನ್‌ನ ಟ್ರಿಗರ್ ಒತ್ತಿದ್ದು ಹೇಗೆ ಎಂಬ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣ ಮತ್ತು ಹಿನ್ನೆಲೆಯನ್ನು ಪತ್ತೆಹಚ್ಚಲು ಮುಂದಿನ ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.