ಹೊಸನಗರ : ಮಧ್ಯ ರಸ್ತೆಯಲ್ಲಿ ಹೊತ್ತಿ ಉರಿದ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ
A truck carrying maize from Shikaripura to Mangaluru caught fire near Beluru village in Hosanagara taluk after an alleged engine fault. The driver escaped safely and no injuries were reported.
ಹೊಸನಗರ: ತಾಲ್ಲೂಕಿನ ನಿಟ್ಟೂರು ಸಮೀಪದ ಬೇಳೂರು ಗ್ರಾಮದಲ್ಲಿ ಶಿಕಾರಿಪುರದಿಂದ ಮಂಗಳೂರಿಗೆ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಎಂಜಿನ್‌ಗೆ ತಡರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಲಾರಿಯ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಶನಿವಾರ ತಡರಾತ್ರಿ ಸುಮಾರು 2 ಗಂಟೆ ವೇಳೆಗೆ ಈ ಅವಘಡ ಸಂಭವಿಸಿದೆ. ಲಾರಿಯ ಚಾಲಕ ಮಹಮ್ಮದ್ ಹುಸೇನ್ ಅವರು ವಾಹನ ಚಲಾಯಿಸುತ್ತಿದ್ದ ವೇಳೆ ಎಂಜಿನ್ ಭಾಗದಲ್ಲಿ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ಕೂಡಲೇ ಲಾರಿಯನ್ನು ರಸ್ತೆ ಬದಿಗೆ ನಿಲ್ಲಿಸಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸಪಟ್ಟರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಹಾನಿಯಾಗುವುದನ್ನು ತಡೆದರು. ಘಟನೆಯಲ್ಲಿ ಲಾರಿಯ ಮುಂಭಾಗ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಪ್ರಾಥಮಿಕ ತನಿಖೆಯ ಪ್ರಕಾರ, ಲಾರಿಯ ಎಂಜಿನ್‌ನ ECM (Electronic Control Module) ದೋಷದಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಆದರೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಲಿದೆ ಎಂದು ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಾನಂದ್ ಕೆ ತಿಳಿಸಿದ್ದಾರೆ.
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…