Categories: Blog

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

ಶೀಘ್ರವೇ ವಾಹನ ಸಂಚಾರಕ್ಕೆ ಮುಕ್ತವಾಗಲಿರುವ ಹುಲಿಕಲ್ ಘಾಟಿ ರಸ್ತೆ

Hulikal Ghat Road, closed for nearly two months following a landslide and road widening works, is likely to reopen for light vehicles and buses within the next few days.

ತೀರ್ಥಹಳ್ಳಿ: ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾರಕ್ಕೆ ಬಂದ್ ಆಗಿದ್ದ ಹುಲಿಕಲ್ ಘಾಟಿ (ಬಾಳೆಬರೆ ಘಾಟಿ) ರಸ್ತೆ ಶೀಘ್ರದಲ್ಲೇ ಮತ್ತೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ಸಾಧ್ಯತೆ ಇದೆ. ಉಡುಪಿ ಹಾಗೂ ಕುಂದಾಪುರ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿರುವ ಈ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಅಂತಿಮ ಹಂತ ತಲುಪಿದ್ದು, ಇನ್ನೆರಡು ಅಥವಾ ಮೂರು ದಿನಗಳಲ್ಲಿ ಲಘು ವಾಹನಗಳು ಹಾಗೂ ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಘಾಟಿ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಏಪ್ರಿಲ್ ತಿಂಗಳಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಭೂಕುಸಿತ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.

ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ರಸ್ತೆಯ ಸುರಕ್ಷತೆ ಹಾಗೂ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ಅಧಿಕಾರಿಗಳ ವರದಿ ಆಧರಿಸಿ ಪ್ರಥಮ ಹಂತದಲ್ಲಿ ಲಘು ವಾಹನಗಳು ಮತ್ತು ಬಸ್‌ಗಳ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡುವ ಕುರಿತು ಚರ್ಚೆ ನಡೆಯುತ್ತಿದೆ.

ಈ ನಡುವೆ ಹುಲಿಕಲ್ ಘಾಟಿ ರಸ್ತೆ ಪುನರಾರಂಭದ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಪ್ರಯಾಣಿಕರು ಹಾಗೂ ಸ್ಥಳೀಯರು ರಸ್ತೆ ತೆರೆಯುವ ದಿನಾಂಕಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

8 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

9 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

10 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

11 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

18 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

19 hours ago