ಹುಲಿಕಲ್ ಘಾಟಿಯಲ್ಲಿ ಶಟಲ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ
Shivamogga Deputy Commissioner has permitted shuttle bus services on Hulikal Ghat Road under specific safety conditions. Only designated mini buses with prescribed seating capacity, wheelbase, and weight limits will be allowed.
ಹೊಸನಗರ : ಇತ್ತೀಚೆಗಷ್ಟೇ ಮಿನಿ ವಾಹನಗಳ ಸಂಚಾರಕ್ಕೆ ಭಾಗಶಃ ತೆರೆಯಲಾಗಿದ್ದ ಹುಲಿಕಲ್ ಘಾಟಿ ರಸ್ತೆಯಲ್ಲಿ ಇದೀಗ ಶಟಲ್ ಬಸ್‌ಗಳ ಸಂಚಾರಕ್ಕೂ ಅಧಿಕೃತ ಅನುಮತಿ ನೀಡಲಾಗಿದೆ. ಸಾರ್ವಜನಿಕರ ಅನುಕೂಲ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಈ ಕುರಿತು ಆದೇಶ ಹೊರಡಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ಪ್ರಕಾರ, ಜೂನ್ 18ರಿಂದ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟಿ ವ್ಯಾಪ್ತಿಯ ಚಂಡಿಕಾಂಬ ದೇವಸ್ಥಾನದ ಸಮೀಪದ ಹೇರ್‌ಪಿನ್ ತಿರುವಿನಲ್ಲಿ ಅಳವಡಿಸಿರುವ 20 ಕಿ.ಮೀ. ವೇಗಮಿತಿ ಸೂಚನಾ ಫಲಕದ ನಿಯಮದಂತೆ ನಿರ್ದಿಷ್ಟ ಸಾಮರ್ಥ್ಯದ ಮಜಲು (Shuttle) ಬಸ್‌ಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಆದೇಶದಂತೆ, ಚಕ್ರತಳ (Wheelbase) 496 ಸೆ.ಮೀ. ಮೀರದ, 40+2 ಆಸನ ಸಾಮರ್ಥ್ಯ ಹೊಂದಿರುವ ಹಾಗೂ ಒಟ್ಟು ವಾಹನ ತೂಕ 9000 ಕೆ.ಜಿ. ಮೀರದ ಮಜಲು ಬಸ್‌ಗಳು ಏಕಮುಖ ಸಂಚಾರ ವ್ಯವಸ್ಥೆಯಡಿ ಸಂಚರಿಸಲು ಅನುಮತಿ ನೀಡಲಾಗಿದೆ.
ಗಮನಾರ್ಹವಾಗಿ, ಕಳೆದ ಏಪ್ರಿಲ್ 9ರಂದು ಹುಲಿಕಲ್ ಘಾಟಿಯ ಹೇರ್‌ಪಿನ್ ತಿರುವಿನಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಸುಮಾರು 12 ಮೀಟರ್ ಎತ್ತರದ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಐದು ಅಡಿ ಭೂಕುಸಿತ ಉಂಟಾಗಿತ್ತು. ಜೊತೆಗೆ ರಸ್ತೆಯ ಮೇಲ್ಭಾಗದಲ್ಲೂ ಬಿರುಕುಗಳು ಕಾಣಿಸಿಕೊಂಡಿದ್ದರಿಂದ ಸುರಕ್ಷತಾ ಕಾರಣಗಳಿಂದ ಮಾಸ್ತಿಕಟ್ಟೆಯಿಂದ ಹೊಸ ಅಂಗಡಿವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು.
ನಂತರ ಪ್ರಯಾಣಿಕರ ಅನುಕೂಲಕ್ಕಾಗಿ ಚಂಡಿಕಾಂಬ ದೇವಸ್ಥಾನದ ಬಳಿ ಮೆಟ್ಟಿಲುಗಳ ಮೂಲಕ ವಾಹನ ಬದಲಾವಣೆ ವ್ಯವಸ್ಥೆ ಕಲ್ಪಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಪ್ರಸ್ತುತ ಹಾನಿಗೊಳಗಾದ ತಿರುವಿನ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಿ, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯನ್ನು ಹಾಕಿ ಲೀನ್ ಕಾಂಕ್ರೀಟ್ ಮೂಲಕ ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ. ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ವರದಿ ಮತ್ತು ಶಿಫಾರಸುಗಳನ್ನು ಪರಿಶೀಲಿಸಿದ ಬಳಿಕ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?…
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ತಿಪಟೂರಿನಲ್ಲಿ ನಾಳೆ ಅಂತ್ಯಕ್ರಿಯೆ Former Karnataka Education Minister and Tiptur…
ಸಾಗರದಲ್ಲಿ ಬೋರ್‌ವೆಲ್ ಕೇಬಲ್ ಕಳ್ಳತನದ ಜಾಲ ಪತ್ತೆ: ನಾಲ್ವರ ಬಂಧನ, ಓಮ್ನಿ ಕಾರು ವಶ Sagara Rural Police arrested…
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹದ ಬಳಿಕ ಯುವಕನ ಅನುಮಾನಾಸ್ಪದ ಸಾವು A young man identified as Abu Sufiyan Khan…
ಚೆಸ್‌ನಲ್ಲಿ ಮಿಂಚಿದ ತೀರ್ಥಹಳ್ಳಿಯ ಸಹೋದರಿಯರು: ರಾಜ್ಯಮಟ್ಟಕ್ಕೆ ಆಯ್ಕೆ Thirthahalli sisters Ganavi and Pavani secured first place in…
ರಿಪ್ಪನ್ ಪೇಟೆ : ಕೆಳಜಾತಿ ಮಹಿಳೆ ಅಂಗನವಾಡಿ ಸಹಾಯಕಿಯಾಗಿ ನೇಮಕ – ಮಕ್ಕಳನ್ನು ಕಳುಹಿಸಲು ಗ್ರಾಮಸ್ಥರ ಹಿಂದೇಟು ಆರೋಪ ,…