w
Headlines
Home » ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

GridArt 20260607

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur.

ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ ಸಂಚಾರಿ ದಳದ ಪಿಎಸ್‌ಐ ಕೆ. ವಿನಾಯಕ ಹೇಳಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅರಣ್ಯ ಸಂಪನ್ಮೂಲಗಳ ಅತಿಯಾದ ದುರುಪಯೋಗ ಮತ್ತು ಅರಣ್ಯ ನಾಶದಿಂದ ವನ್ಯಜೀವಿಗಳು ತಮ್ಮ ಸಹಜ ವಾಸಸ್ಥಾನ ಕಳೆದುಕೊಂಡು ನಾಡಿನತ್ತ ಮುಖ ಮಾಡುತ್ತಿರುವುದು ಹೆಚ್ಚುತ್ತಿರುವ ಮಾನವ–ಪ್ರಾಣಿ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ ಎಂದು ಅವರು ತಿಳಿಸಿದರು.

ಈ ಸಮಸ್ಯೆಗೆ ದೀರ್ಘಕಾಲಿಕ ಪರಿಹಾರ ಕಂಡುಕೊಳ್ಳಲು ನೈಜ ಅರಣ್ಯಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ ಅಗತ್ಯವಾಗಿದೆ. ಅರಣ್ಯ ರಕ್ಷಣೆಯ ಜೊತೆಗೆ ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಿದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಶಾಲೆಯ ಪ್ರಾಂಶುಪಾಲ ಕೆ.ಎಸ್. ವಾಸುದೇವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿ.ಕೆ. ಪ್ರಫುಲ್ಲ, ಎಚ್.ವಿ. ಮುರಳೀಧರ, ಸುಜಾತಾ ಮಹಾಲೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.