ಹುಂಚ ಸಹಕಾರ ಸಂಘದ ಮಹಾಸಭೆ ಯಶಸ್ವಿ; ಸಾಲ ಮರುಪಾವತಿಗೆ ರೈತರಿಗೆ ಕರೆ
The Annual General Meeting of Huncha Primary Agricultural Credit Cooperative Society for 2023-24 and 2024-25 was held successfully. President Raghavendra Totadakattu urged farmers to repay crop and medium-term loans on time and support the society’s growth.
ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಯಶಸ್ವಿಯಾಗಿ ನಡೆಯಿತು.
ಸಂಘದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದಲ್ಲಿ ಈ ಹಿಂದಿನ ಅವಧಿಯಲ್ಲಿ ಉಂಟಾಗಿದ್ದ ನಷ್ಟದ ಕುರಿತು ಸದಸ್ಯರ ಸಮ್ಮುಖದಲ್ಲಿ ಸವಿಸ್ತಾರವಾಗಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಸಂಘವನ್ನು ಅಭಿವೃದ್ಧಿಯೊಂದಿಗೆ ಲಾಭದಾಯಕ ಸಂಸ್ಥೆಯನ್ನಾಗಿ ರೂಪಿಸಲು ಸದಸ್ಯರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ರೈತರು ಸಂಘದಿಂದ ಪಡೆದಿರುವ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲಗಳನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ಸಂಘದ ಆರ್ಥಿಕ ಸ್ಥಿರತೆ ಮತ್ತು ಬೆಳವಣಿಗೆಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಷೇರುದಾರರು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಎಸ್. ವಾರ್ಷಿಕ ವರದಿ ಹಾಗೂ ಆರ್ಥಿಕ ವಿವರಗಳನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಸಂಘದ ಸಿಬ್ಬಂದಿ ವರ್ಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…