ಹೊಸನಗರ, ನಗರ ಪೊಲೀಸ್ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ
IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases.
ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ ನಗರ ಪೊಲೀಸ್ ಠಾಣೆಗಳಲ್ಲಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.
ಆಯಾ ಠಾಣೆಗಳಿಗೆ ಭೇಟಿ ನೀಡಿದ ಐಜಿಪಿ ಅವರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು.ಠಾಣೆಗಳ ದೈನಂದಿನ ಕಾರ್ಯವೈಖರಿ, ಅಪರಾಧ ಪ್ರಕರಣಗಳ ದಾಖಲಾತಿ, ಕಡತಗಳ ನಿರ್ವಹಣೆ ಹಾಗೂ ಇಲಾಖೆಯ ಇತರೆ ಪ್ರಮುಖ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ರವಿಕಾಂತೇಗೌಡ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಸೂಚಿಸಿದರು.
ಇದೇ ಸಂದರ್ಭ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆ ಆಲಿಸಿದ ಐಜಿಪಿ ರವಿಕಾಂತೇಗೌಡ ಅವರು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಅಗತ್ಯ ಸಲಹೆ ಹಾಗೂ ಮಾರ್ಗಸೂಚಿಗಳನ್ನು ನೀಡಿದರು.
ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದರು. ಈ ಪರಿವೀಕ್ಷಣೆ ಸಂದರ್ಭ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಇದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…