Headlines

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases.

ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ ನಗರ ಪೊಲೀಸ್ ಠಾಣೆಗಳಲ್ಲಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು.

ಆಯಾ ಠಾಣೆಗಳಿಗೆ ಭೇಟಿ ನೀಡಿದ ಐಜಿಪಿ ಅವರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸಿದರು.ಠಾಣೆಗಳ ದೈನಂದಿನ ಕಾರ್ಯವೈಖರಿ, ಅಪರಾಧ ಪ್ರಕರಣಗಳ ದಾಖಲಾತಿ, ಕಡತಗಳ ನಿರ್ವಹಣೆ ಹಾಗೂ ಇಲಾಖೆಯ ಇತರೆ ಪ್ರಮುಖ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ರವಿಕಾಂತೇಗೌಡ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದು ಸೂಚಿಸಿದರು.

ಇದೇ ಸಂದರ್ಭ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕುಂದುಕೊರತೆ ಆಲಿಸಿದ ಐಜಿಪಿ ರವಿಕಾಂತೇಗೌಡ ಅವರು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುವಂತೆ ಸಿಬ್ಬಂದಿಗೆ ಅಗತ್ಯ ಸಲಹೆ ಹಾಗೂ ಮಾರ್ಗಸೂಚಿಗಳನ್ನು ನೀಡಿದರು.

ಸಾರ್ವಜನಿಕ ಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡಬೇಕು ಎಂದು ಅವರು ಸೂಚನೆ ನೀಡಿದರು. ಈ ಪರಿವೀಕ್ಷಣೆ ಸಂದರ್ಭ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್‌ ಇದ್ದರು.

About The Author