ಜಲ್ ಜೀವನ್ ಮಿಷನ್ ಪೈಪ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ₹7.92 ಲಕ್ಷ ಮೌಲ್ಯದ ಪೈಪ್ ವಶ
Holehonnur Police in Bhadravathi taluk arrested a man accused of stealing 18 bundles of Jal Jeevan Mission pipes. Pipes worth ₹7.92 lakh were recovered from the accused.
ಶಿವಮೊಗ್ಗ: ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಬಳಸಲಾಗುತ್ತಿದ್ದ ಪೈಪ್‌ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ನಾಗತಿ ಬೆಳಗಲು ಗ್ರಾಮದ ನಿವಾಸಿ ರಾಕೇಶ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು ₹7.92 ಲಕ್ಷ ಮೌಲ್ಯದ ಪೈಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಹೊಳೆಹೊನ್ನೂರು ವ್ಯಾಪ್ತಿಯ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಜಲ್ ಜೀವನ್ ಮಿಷನ್ ಯೋಜನೆಗಾಗಿ ಸಂಗ್ರಹಿಸಲಾಗಿದ್ದ 18 ಬಂಡಲ್ ಪೈಪ್‌ಗಳನ್ನು ರಾಕೇಶ್ ಕಳವು ಮಾಡಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಹೊಳೆಹೊನ್ನೂರು ಪೊಲೀಸರು ಭಾನುವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಪಿಐ ಶಿವಪ್ರಸಾದ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…