Categories: crime news

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ

ಜೋಗ ಜಲಪಾತದ ನಿಷೇಧಿತ ಪ್ರದೇಶದಲ್ಲಿ ರೀಲ್ಸ್ ಚಿತ್ರೀಕರಣ: ತೀರ್ಥಹಳ್ಳಿಯ ಮೂವರ ವಿರುದ್ಧ ಸುಮುಟೋ ಪ್ರಕರಣ

Three youths from Thirthahalli have been booked in a suo motu case for entering the prohibited area at Jog Falls, filming Instagram Reels, and uploading dangerous videos on social media.

ಶಿವಮೊಗ್ಗ: ಜೋಗ ಜಲಪಾತದ ನಿಷೇಧಿತ ಹಾಗೂ ಅಪಾಯಕಾರಿ ಪ್ರದೇಶಕ್ಕೆ ತೆರಳಿ ರೀಲ್ಸ್‌ (Reels) ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಮೂವರು ಯುವಕರ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಸುಮುಟೋ (ಸ್ವಯಂ ಪ್ರೇರಿತ) ಪ್ರಕರಣ ದಾಖಲಾಗಿದೆ.

ಜೋಗ ಜಲಪಾತದ ರಾಜಾ ಫಾಲ್ಸ್ ಪ್ರದೇಶವು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕು ವ್ಯಾಪ್ತಿಗೆ ಸೇರಿದ್ದು, ಇದು ಅತ್ಯಂತ ಅಪಾಯಕಾರಿ ಪ್ರದೇಶವಾಗಿರುವುದರಿಂದ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಮೂವರು ಯುವಕರು ಅಲ್ಲಿಗೆ ತೆರಳಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಜೂನ್ 29, 2026ರಂದು ಮಧ್ಯಾಹ್ನ 2:30ಕ್ಕೆ ಸಿದ್ದಾಪುರ ಪೊಲೀಸ್ ಠಾಣೆಯ ಎಸ್‌ಐ ಶಾಂತಿನಾಥ ಕೆ. ಪಾಸಾನೆ ಅವರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS)–2023ರ ಸೆಕ್ಷನ್ 125 ಹಾಗೂ 3(5) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

‘ಮಿಸ್ಟರ್ ಕನ್ನಡಿಗ’ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮೂರು ದಿನಗಳ ಹಿಂದೆ ಅಪ್‌ಲೋಡ್ ಮಾಡಲಾಗಿದ್ದ ಎರಡು ವಿಡಿಯೋಗಳಲ್ಲಿ, ಜೋಗ ಜಲಪಾತದ ರಾಜಾ ಫಾಲ್ಸ್‌ನ ಅಪಾಯಕಾರಿ ಕಲ್ಲಿನ ಬಂಡೆಗಳ ಮೇಲೆ ಓಡಾಡುತ್ತಾ ಚಿತ್ರೀಕರಣ ಮಾಡಿರುವುದು ಕಂಡುಬಂದಿದೆ.

ವಿಡಿಯೋದಲ್ಲಿ “ಜೋಗ ಫಾಲ್ಸ್ ಎಷ್ಟು ಎತ್ತರದಿಂದ ನೀರು ಬೀಳುತ್ತದೆ, ಕೆಳಗಡೆ ಫುಲ್ ಪ್ರಪಾತ, ನೆಕ್ಸ್ಟ್ ಲೆವೆಲ್ ವ್ಯೂ” ಎಂದು ಹೇಳುತ್ತಾ ಅಪಾಯಕಾರಿ ಪ್ರದೇಶದಲ್ಲಿ ಸಂಚರಿಸಿರುವ ದೃಶ್ಯಗಳಿವೆ.

ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ವೇಳೆ ಈ ವಿಡಿಯೋ ಪೊಲೀಸ್ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ತನಿಖೆ ನಡೆಸಿದಾಗ ನಿರ್ಬಂಧಿತ ಪ್ರದೇಶಕ್ಕೆ ಪ್ರವೇಶಿಸಿರುವುದು ದೃಢಪಟ್ಟಿದೆ.

ಮಾವಿನಗುಂಡಿ ಸಮೀಪದ ಬ್ರಿಟಿಷ್ ಬಂಗಲೆ ಬಳಿ ಇರುವ ಜಲಪಾತದ ತುದಿ ಹಾಗೂ ಕಲ್ಲಿನ ಬಂಡೆಗಳ ಪ್ರದೇಶಕ್ಕೆ ಪ್ರವೇಶಿಸುವುದು ಜೀವಕ್ಕೆ ಅಪಾಯಕಾರಿಯಾಗಿದೆ. ಈ ಕುರಿತು ಎಚ್ಚರಿಕೆ ಫಲಕಗಳು ಹಾಗೂ ಪ್ರವೇಶ ನಿಷೇಧ ಸೂಚನೆಗಳನ್ನು ಅಳವಡಿಸಲಾಗಿದ್ದರೂ ಆರೋಪಿಗಳು ನಿಯಮ ಉಲ್ಲಂಘಿಸಿ ವಿಡಿಯೋ ಚಿತ್ರೀಕರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಂತಹ ವಿಡಿಯೋಗಳನ್ನು ವೀಕ್ಷಿಸುವ ಇತರೆ ಪ್ರವಾಸಿಗರು ಸಹ ಅಪಾಯಕಾರಿ ಸಾಹಸಗಳಿಗೆ ಪ್ರೇರೇಪಿತರಾಗುವ ಸಾಧ್ಯತೆ ಇರುವುದರಿಂದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

7 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

7 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

7 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

18 hours ago

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…

19 hours ago

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ

ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…

20 hours ago