ರಿಪ್ಪನ್ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ
Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him.
ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ವಾಪಸ್ ಮನೆಗೆ ಬಂದಿಲ್ಲ ಎಂದು ತಿಳಿದುಬಂದಿದೆ.
ಕುಟುಂಬದವರು ಹಾಗೂ ಸಂಬಂಧಿಕರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಇದುವರೆಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಜುನೇದ್ ಅವರ ಬಗ್ಗೆ ಮಾಹಿತಿ ಇರುವವರು ಅಥವಾ ಎಲ್ಲಿಯಾದರೂ ಕಂಡುಬಂದಲ್ಲಿ ತಕ್ಷಣವೇ ಕುಟುಂಬದವರನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ಸಂಪರ್ಕ ಸಂಖ್ಯೆ: 94499 70210
ಸ್ಥಳೀಯ ಪೊಲೀಸ್ ಠಾಣೆಯಲ್ಲಿಯೂ ನಾಪತ್ತೆ ಕುರಿತು ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುನೇದ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮೇಲ್ಕಂಡ ಸಂಖ್ಯೆಗೆ ಕರೆ ಮಾಡಿ ತಿಳಿಸುವಂತೆ ಕುಟುಂಬ ಸದಸ್ಯರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್