Categories: Education

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಅಬ್ಬರ: ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ !

IMD forecasts active monsoon across Karnataka from June 26, with heavy rain alert for Shivamogga, Coastal Karnataka, Malnad and several other districts over the next week.

ಬೆಂಗಳೂರು, ಜೂನ್ 26: ಜೂನ್ ತಿಂಗಳ ಕೊನೆಯ ವಾರಕ್ಕೆ ಕಾಲಿಟ್ಟರೂ ರಾಜ್ಯದಲ್ಲಿ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಹಿನ್ನೆಲೆಯಲ್ಲಿ ಆತಂಕಗೊಂಡಿದ್ದ ಜನರಿಗೆ ಇದೀಗ ಭಾರತೀಯ ಹವಾಮಾನ ಇಲಾಖೆ (IMD) ನೆಮ್ಮದಿಯ ಸುದ್ದಿ ನೀಡಿದೆ. ಇಂದಿನಿಂದ (ಜೂನ್ 26) ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಐಎಂಡಿ ಮಾಹಿತಿ ಪ್ರಕಾರ, ಜೂನ್ 26ರಿಂದ 28ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 29ರಿಂದ ಜುಲೈ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.
ಶಿವಮೊಗ್ಗ ಸೇರಿ ಮಲೆನಾಡಿಗೆ ಮಳೆ ಅಲರ್ಟ್
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ 29 ಮತ್ತು 30ರಂದು ಭಾರೀ ಮಳೆಯ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಹಾಸನ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 1ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 30ರಂದು ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.


ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ, ಮುಂದಿನ ಐದು ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿಯೂ ಯಾವುದೇ ಮಹತ್ತರ ಬದಲಾವಣೆ ನಿರೀಕ್ಷೆಯಿಲ್ಲ ಎಂದು ತಿಳಿಸಿದೆ.

ಮುಂದಿನ 24ರಿಂದ 48 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.aà

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

5 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

6 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

6 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

11 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

12 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

15 hours ago