KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

KSRTC ಬಸ್‌ನಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ: ಮಹಿಳೆ ಸೇರಿ ಇಬ್ಬರು ಬಂಧನ

Two accused, including a woman, have been arrested by Shiralakoppa police for stealing gold ornaments worth ₹6.20 lakh from a passenger on a KSRTC bus. Police recovered 62 grams of gold jewellery and remanded the accused to judicial custody.

ಶಿಕಾರಿಪುರ, ಜೂನ್ 9: ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಮಹಿಳೆ ಸೇರಿ ಇಬ್ಬರನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು ₹6.20 ಲಕ್ಷ ಮೌಲ್ಯದ 62 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ತರಳಬಾಳು ಬಡಾವಣೆಯ ನಿವಾಸಿಯಾದ ಮಹಿಳೆಯೊಬ್ಬರು ಕಳೆದ ಏಪ್ರಿಲ್ 8ರಂದು ಶಿರಾಳಕೊಪ್ಪದಿಂದ ಹಿರೇಕೆರೂರಿಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ಹತ್ತಿದ್ದರು. ಬಸ್ ಸುಣ್ಣದಕೊಪ್ಪ ನಿಲ್ದಾಣದ ಸಮೀಪ ತಲುಪಿದ ವೇಳೆ ತಮ್ಮ ವ್ಯಾನಿಟಿ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿದ್ದ ಚಿನ್ನಾಭರಣಗಳು ಕಳುವಾಗಿರುವುದು ಬೆಳಕಿಗೆ ಬಂದಿತ್ತು.

ಈ ಕುರಿತು ಮಹಿಳೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಭಿಸಿದ್ದರು.
ಶಿಕಾರಿಪುರ ಉಪ ವಿಭಾಗದ ಡಿವೈಎಸ್ಪಿ ಕೇಶವ ಕೆ.ಇ. ಹಾಗೂ ಶಿಕಾರಿಪುರ ನಗರ ವೃತ್ತದ ಸಿಪಿಐ ಸಂತೋಷ್ ಎಂ. ಪಾಟೀಲ್ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿಗಳನ್ನು ವೆಂಕಟೇಶ (35) ಹಾಗೂ ಹೊಸಮನೆಯ ಮಂಜುಳಾ ಸಿ (42) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ

ಸಾಗರ ಗ್ರಾಮಾಂತರ ಠಾಣೆಯ ನೂತನ ಪಿಎಸ್‌ಐ ಆಗಿ ಶಂಕರ್ ಗೌಡ ಪಾಟೀಲ್ ನೇಮಕ PSI Shankar Gowda Patil has…

8 hours ago

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys…

8 hours ago

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

10 hours ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

11 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

18 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

18 hours ago