w
Headlines
Home » ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ

GridArt 20260629

ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ

Forest department officials arrested a man in Gama village, Shikaripura, for poaching a wild boar and seized 27 kg of raw meat prepared for illegal sale.

​ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮನೆಯಲ್ಲೇ ಅದರ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗಾಮ ಗ್ರಾಮದ ನಿವಾಸಿ ಕುಮಾರ್ ಬಂಧಿತ ಆರೋಪಿ.

​ಖಚಿತ ಮಾಹಿತಿ ಮೇರೆಗೆ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ, ಬರೋಬ್ಬರಿ 27 ಕೆ.ಜಿ ತೂಕದ ಕಾಡುಹಂದಿಯ ಹಸಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ವನ್ಯಜೀವಿಯನ್ನು ಕೊಲ್ಲಲು ಮತ್ತು ಮಾಂಸ ಕತ್ತರಿಸಲು ಬಳಸಿದ್ದ ಕತ್ತಿ, ಮಚ್ಚು ಹಾಗೂ ಮಾಂಸ ತೂಕ ಮಾಡಲು ಇಟ್ಟುಕೊಂಡಿದ್ದ ತಕ್ಕಡಿಯನ್ನೂ ಸಹ ಅಧಿಕಾರಿಗಳು ಸ್ಥಳದಲ್ಲೇ ಜಪ್ತಿ ಮಾಡಿದ್ದಾರೆ.

ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿ ಶಾಂತಪ್ಪ ಪೂಜಾರ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ತಂಡದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಕರೀಮ್, ಅಮಿತ್ ಹಾಗೂ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್ ಮತ್ತು ಚಂದ್ರಪ್ಪ ಲಮಾಣಿ ಅವರು ಪಾಲ್ಗೊಂಡಿದ್ದರು.

​ಸದ್ಯ ಬಂಧಿತ ಆರೋಪಿ ಕುಮಾರ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹಾಗೂ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.