ಕಾಡುಹಂದಿ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ; ಆರೋಪಿ ಅಂದರ್, 27 ಕೆಜಿ ಮಾಂಸ ಜಪ್ತಿ
Forest department officials arrested a man in Gama village, Shikaripura, for poaching a wild boar and seized 27 kg of raw meat prepared for illegal sale.
ಶಿಕಾರಿಪುರ: ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮನೆಯಲ್ಲೇ ಅದರ ಮಾಂಸವನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗಾಮ ಗ್ರಾಮದ ನಿವಾಸಿ ಕುಮಾರ್ ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಸಿಬ್ಬಂದಿ, ಬರೋಬ್ಬರಿ 27 ಕೆ.ಜಿ ತೂಕದ ಕಾಡುಹಂದಿಯ ಹಸಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ವನ್ಯಜೀವಿಯನ್ನು ಕೊಲ್ಲಲು ಮತ್ತು ಮಾಂಸ ಕತ್ತರಿಸಲು ಬಳಸಿದ್ದ ಕತ್ತಿ, ಮಚ್ಚು ಹಾಗೂ ಮಾಂಸ ತೂಕ ಮಾಡಲು ಇಟ್ಟುಕೊಂಡಿದ್ದ ತಕ್ಕಡಿಯನ್ನೂ ಸಹ ಅಧಿಕಾರಿಗಳು ಸ್ಥಳದಲ್ಲೇ ಜಪ್ತಿ ಮಾಡಿದ್ದಾರೆ.
ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿ ಶಾಂತಪ್ಪ ಪೂಜಾರ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ತಂಡದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಕರೀಮ್, ಅಮಿತ್ ಹಾಗೂ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್ ಮತ್ತು ಚಂದ್ರಪ್ಪ ಲಮಾಣಿ ಅವರು ಪಾಲ್ಗೊಂಡಿದ್ದರು.
ಸದ್ಯ ಬಂಧಿತ ಆರೋಪಿ ಕುಮಾರ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಹಾಗೂ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…
ಶಂಕರಮಠ ರಸ್ತೆಯ ರಾಹುಲ್ ಹುಂಡೈ ಶೋರೂಮ್‌ನಲ್ಲಿ ಮತ್ತೆ ಅಗ್ನಿ ಆಕಸ್ಮಿಕ Small fire accident reported at Rahul Hyundai…
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…