ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ
Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway.
ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ (Additional SP) ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದ್ದು, ತಂಡದ ಕಾರ್ಯಾಚರಣೆಯಲ್ಲಿ ಪ್ರಮುಖ ಆರೋಪಿಗಳಾದ ಅಂಬು ಅನಿಲ್, ಮಧು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಅವರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಗಳನ್ನು ಶನಿವಾರ ಬೆಳಗ್ಗೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ವಿಚಾರಣೆ ಮುಂದುವರಿದಿದೆ.
ಶುಕ್ರವಾರ ಸಂಜೆ ಸುಮಾರು 4.45ರ ವೇಳೆಗೆ ನಗರದ ಇಸ್ಪೀಟ್ ಅಡ್ಡೆಯೊಂದರಲ್ಲಿ ನರಸಿಂಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿತ್ತು. ಘಟನೆ ನಗರದಲ್ಲಿ ಆತಂಕ ಸೃಷ್ಟಿಸಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಸ್ತುತ ಆರೋಪಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…