POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

GridArt 20260617

ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಕ್ಷಣದಲ್ಲಿ ಕುಸಿದು ಬಿದ್ದು ಸಾವು; ರಾಷ್ಟ್ರಮಟ್ಟದ ಬಾಡಿ ಬಿಲ್ಡರ್ ದುರ್ಮರಣ

National-level bodybuilder Sushil Kumar, 26, from Davanagere, collapsed and died shortly after returning home from the gym. Doctors suspect a possible cardiac arrest.

ರಾಷ್ಟ್ರಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಗೆದ್ದು ಹೆಸರು ಮಾಡಿದ್ದ ಯುವ ಬಾಡಿ ಬಿಲ್ಡರ್ ಒಬ್ಬರು ಜಿಮ್ ಮುಗಿಸಿ ಮನೆಗೆ ಬಂದ ಕೆಲವೇ ಹೊತ್ತಿನಲ್ಲಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ದಾವಣಗೆರೆಯ ಕೆ.ಟಿ. ಜಂಬಣ್ಣನಗರದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕೆ.ಟಿ.ಜೆ ನಗರದ ನಿವಾಸಿ ಸುಶೀಲ್ ಕುಮಾರ್ (26) ಮೃತ ಬಾಡಿ ಬಿಲ್ಡರ್. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದ ಅವರು, ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಗಳಿಗೆ ಸಿದ್ಧತೆ ನಡೆಸುತ್ತಿದ್ದರು.

ಮಂಗಳವಾರ ರಾತ್ರಿ ಜಿಮ್ ವ್ಯಾಯಾಮ ಮುಗಿಸಿ ಮನೆಗೆ ಬಂದಿದ್ದ ಸುಶೀಲ್ ಕುಮಾರ್, ತಲೆ ಸುತ್ತುತ್ತಿರುವುದಾಗಿ ಕುಟುಂಬ ಸದಸ್ಯರಿಗೆ ತಿಳಿಸಿದ್ದು, ಕೆಲವೇ ಕ್ಷಣಗಳಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಕ್ತದೊತ್ತಡ ತೀವ್ರವಾಗಿ ಕಡಿಮೆಯಾಗಿದ್ದು (ಲೋ ಬಿಪಿ) ಹೃದಯಾಘಾತ ಸಂಭವಿಸಿರಬಹುದು ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ನಿಖರ ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ವರದಿಯ ಬಳಿಕ ತಿಳಿಯಲಿದೆ.

ಮೃತ ಸುಶೀಲ್ ಕುಮಾರ್ ಅವರ ತಾಯಿ ದೇವಮ್ಮ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಡಿ-ಗ್ರೂಪ್ ನೌಕರರಾಗಿದ್ದು, ಮಗನ ಅಕಾಲಿಕ ನಿಧನದಿಂದ ಕುಟುಂಬದಲ್ಲಿ ಆಕ್ರಂದನ ಮಡುಗಟ್ಟಿದೆ. “ಮುಂದೆ ನನಗೆ ಆಸರೆ ಯಾರು?” ಎಂದು ತಾಯಿಯ ರೋದನ ಸ್ಥಳದಲ್ಲಿದ್ದವರ ಮನಕಲಕುವಂತಿತ್ತು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.