w
Headlines
Home » ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

Crime news 23 (1)

ಮದುವೆ ಭರವಸೆ ನೀಡಿ ಅತ್ಯಾಚಾರ, ಗರ್ಭಪಾತ ಮಾಡಿಸಿದ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯ ದೂರು

A young woman in Shivamogga has accused a police constable of rape on the false promise of marriage, forced abortion, blackmail using private videos, and issuing death threats. An FIR has been registered and investigation is underway.

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ, ಬಳಿಕ ಗರ್ಭಪಾತ ಮಾಡಿಸಿ ವಂಚನೆ ನಡೆಸಿರುವುದಾಗಿ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಯನ್ನು ಇನ್ನೂ ಬಂಧಿಸಿಲ್ಲ ಎಂದು ಯುವತಿ ದೂರಿದ್ದಾರೆ.

ಸಂತ್ರಸ್ತೆಯ ಹೇಳಿಕೆಯ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಫೇಸ್‌ಬುಕ್ ಮೂಲಕ ಪೊಲೀಸ್ ಕಾನ್‌ಸ್ಟೇಬಲ್‌ನೊಂದಿಗೆ ಪರಿಚಯವಾಗಿದ್ದು, ಬಳಿಕ ಅದು ಪ್ರೀತಿಗೆ ತಿರುಗಿತ್ತು. ಈ ಅವಧಿಯಲ್ಲಿ ಇಬ್ಬರೂ ಹಲವು ಬಾರಿ ಭೇಟಿಯಾಗಿದ್ದರು. ತಾನು ಪೊಲೀಸ್ ಸಿಬ್ಬಂದಿಯಾಗಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿ ಖಾಸಗಿ ಲಾಡ್ಜ್‌ಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಅಲ್ಲದೆ, ಖಾಸಗಿ ಕ್ಷಣಗಳ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು, ವಿಷಯವನ್ನು ಯಾರಿಗಾದರೂ ತಿಳಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿದ್ದಾರೆ.

ತನ್ನ ತಂಗಿಯ ಮದುವೆಯಾದ ಬಳಿಕ ವಿವಾಹವಾಗುವುದಾಗಿ ಭರವಸೆ ನೀಡಿದ್ದ ಆರೋಪಿಯು ಬಳಿಕ ಸಂಪರ್ಕ ಕಡಿತಗೊಳಿಸಿದ್ದಾನೆ. ನಂತರ ತಾನು ಗರ್ಭಿಣಿಯಾಗಿರುವ ವಿಚಾರ ತಿಳಿಸಿದಾಗ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಈ ವಿಚಾರವಾಗಿ ಇಬ್ಬರ ನಡುವೆ ಜಗಳ ಉಂಟಾಗಿ 112 ಸಹಾಯವಾಣಿಗೆ ಕರೆ ಮಾಡಲಾಗಿತ್ತು. ಆ ವೇಳೆ ರಾಜಿ ಮಾಡಿಕೊಂಡು, ಸಾಲ ತೀರಿದ ಬಳಿಕ ಮದುವೆಯಾಗುವುದಾಗಿ ಮತ್ತೊಮ್ಮೆ ಭರವಸೆ ನೀಡಿದ್ದ. ಆದರೆ ನಂತರವೂ ಹಲ್ಲೆ ಹಾಗೂ ಕಿರುಕುಳ ಮುಂದುವರಿಸಿದ್ದಾನೆ ಎಂದು ಯುವತಿ ತಿಳಿಸಿದ್ದಾರೆ.

ಒಮ್ಮೆ ಮಹಿಳಾ ಠಾಣೆಗೆ ದೂರು ನೀಡಲು ತೆರಳಿದಾಗಲೂ ಮದುವೆಯಾಗುವುದಾಗಿ ಹೇಳಿ ದೂರು ದಾಖಲಿಸದಂತೆ ತಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

ಇದೀಗ ಆರೋಪಿಯು ಮತ್ತೊಬ್ಬ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ತನ್ನಿಂದ ಖಾಲಿ ಹಾಳೆ ಮೇಲೆ ಸಹಿ ಪಡೆದುಕೊಂಡಿದ್ದಾನೆ. ದೂರು ಹಿಂಪಡೆಯುವಂತೆ ಜೀವ ಬೆದರಿಕೆ ಹಾಕುತ್ತಿರುವುದಾಗಿ ಯುವತಿ ಆರೋಪಿಸಿದ್ದಾರೆ.

ಎರಡು ವಾರಗಳ ಹಿಂದೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಯನ್ನು ಬಂಧಿಸಿಲ್ಲ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿಐಜಿ ಅವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.