ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ: ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
A 27-year-old woman, Poornima, along with her two young sons, has gone missing from Kanivemane village in Shikaripura taluk, Shivamogga district. Police have appealed to the public for information.
ಶಿವಮೊಗ್ಗ, ಜೂನ್ 4: ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿವೆಮನೆ ಗ್ರಾಮದ ನಿವಾಸಿ ಮಹೇಶ್ ಅವರ ಪತ್ನಿ ಪೂರ್ಣಿಮಾ (27) ಅವರು ತಮ್ಮ ಇಬ್ಬರು ಗಂಡು ಮಕ್ಕಳೊಂದಿಗೆ ಮೇ 31ರಂದು ಮನೆಯಿಂದ ಹೊರಗೆ ತೆರಳಿದ್ದು, ಇದುವರೆಗೆ ಮನೆಗೆ ವಾಪಸ್ಸಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾದ ಪೂರ್ಣಿಮಾ ಅವರು ಸುಮಾರು 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋದಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆ ಮಾತನಾಡುವ ಅವರು ಮನೆಯಿಂದ ಹೊರಡುವ ವೇಳೆ ಆಕಾಶ ನೀಲಿ ಬಣ್ಣದ ಚೂಡಿದಾರ ಹಾಗೂ ಬಿಳಿ ಬಣ್ಣದ ವೇಲ್ ಧರಿಸಿದ್ದರು.
ಅವರೊಂದಿಗೆ ನಾಪತ್ತೆಯಾಗಿರುವ ಧೃವ (8) ಸುಮಾರು 3 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಗೋದಿ ಮೈಬಣ್ಣ ಹಾಗೂ ಕೋಲು ಮುಖ ಹೊಂದಿದ್ದು, ಬಿಳಿ-ಕಪ್ಪು ಬಣ್ಣದ ತುಂಬುತೋಳಿನ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.
ಇನ್ನೋರ್ವ ಪುತ್ರ ಧನವೀರ್ (2) ಸುಮಾರು 2 ಅಡಿ ಎತ್ತರ, ತೆಳ್ಳನೆಯ ಮೈಕಟ್ಟು, ಗೋದಿ ಮೈಬಣ್ಣ ಹಾಗೂ ದುಂಡು ಮುಖ ಹೊಂದಿದ್ದು, ಬಿಳಿ ಬಣ್ಣದ ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.
ಈ ತಾಯಿ ಹಾಗೂ ಇಬ್ಬರು ಮಕ್ಕಳ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ತಕ್ಷಣವೇ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…