ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಕಣ್ಣೀರಿನಿಂದ ನೆಮ್ಮದಿಯತ್ತ: ಬಡ ತಾಯಿ-ಮಗಳಿಗೆ ಮನೆ ಕಟ್ಟಿಕೊಟ್ಟ ಗ್ರಾಮಸ್ಥರು

ಸುದ್ದಿ ಬದಲಿಸಿತು ಬದುಕು: ಪೋಸ್ಟ್ ಮ್ಯಾನ್ ನ್ಯೂಸ್ ವರದಿಯಿಂದ ನಿರ್ಗತಿಕ ಕುಟುಂಬಕ್ಕೆ ಸೂರು

A Postman News report highlighting the plight of Shashikala and her disabled daughter in Melinasampalli village prompted MLA Belur Gopalakrishna, Asare Committee, officials and villagers to come together and build a permanent house for the family.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿನಸಂಪಳ್ಳಿ ಗ್ರಾಮದ ಬಡ ಮಹಿಳೆ ಶಶಿಕಲಾ ಹಾಗೂ ಆಕೆಯ ಅಂಗವಿಕಲ ಮಗಳಿಗೆ ಅಂತೂ ಶಾಶ್ವತ ಆಸರೆಯೊಂದು ದೊರೆತಿದೆ. ಪೋಸ್ಟ್ ಮ್ಯಾನ್ ನ್ಯೂಸ್‌ನಲ್ಲಿ ಪ್ರಕಟವಾಗಿದ್ದ “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷಿ” ಎಂಬ ವಿಶೇಷ ವರದಿಯ ಫಲವಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಒಗ್ಗೂಡಿ ನಿರ್ಗತಿಕ ಕುಟುಂಬಕ್ಕೆ ನೆಲೆ ಕಲ್ಪಿಸಿದ್ದಾರೆ.

ಶಶಿಕಲಾ ತನ್ನ ಅಂಗವಿಕಲ ಮಗಳೊಂದಿಗೆ ಕಸ ವಿಲೇವಾರಿ ಘಟಕದಲ್ಲಿ ವಾಸ ಮಾಡುತ್ತಾ ಸರ್ಕಾರದ ಯಾವೊಂದು ಸೌಲಭ್ಯವನ್ನು ಪಡೆಯದೇ ಕಿವಿ ಕೇಳಿಸದ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ಅಂಗವಿಕಲ ಮಗಳೊಂದಿಗೆ ಸಂಕಷ್ಟದ ಜೀವನ ನಡೆಸುತ್ತಿದ್ದರು. ಕುಟುಂಬದ ದುಸ್ಥಿತಿಯನ್ನು ಬೆಳಕಿಗೆ ತಂದ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಸಾರ್ವಜನಿಕರ ಗಮನ ಸೆಳೆದಿದ್ದು, ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ತಕ್ಷಣ ಸ್ಪಂದಿಸುವಂತೆ ಮಾಡಿತ್ತು.

ಈ ವಿಷಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗಮನಕ್ಕೆ ಬಂದ ತಕ್ಷಣ ಅವರು ನೆರವಿನ ಹಸ್ತ ಚಾಚಿದ್ದು, ಸ್ಥಳೀಯ ಮುಖಂಡ ಚಿದಂಬರಂ ಅವರ ನೇತೃತ್ವದಲ್ಲಿ “ಆಸರೆ ಸಮಿತಿ” ರಚನೆಯಾಯಿತು. ಮಾರುತಿಪುರ ಹಾಗೂ ಮೇಲಿನಸಂಪಳ್ಳಿ ಗ್ರಾಮಸ್ಥರು, ದಾನಿಗಳು ಮತ್ತು ಸಮಿತಿಯ ಸದಸ್ಯರು ಕೈಜೋಡಿಸಿ ಶಶಿಕಲಾ ಕುಟುಂಬಕ್ಕೆ ಹೊಸ ಮನೆಯನ್ನು ನಿರ್ಮಿಸಿಕೊಡುವ ಕಾರ್ಯ ಆರಂಭಿಸಿದರು.

ಈ ನಡುವೆ ಶಶಿಕಲಾ ಅವರಿಗೆ ಕಿವಿಯಂತ್ರ, ರೇಷನ್ ಕಾರ್ಡ್, ಅಂಗವಿಕಲ ಮಗಳಿಗೆ ಆಧಾರ್ ಕಾರ್ಡ್, ತಾತ್ಕಾಲಿಕ ನಿವಾಸಕ್ಕೆ ನೀರು ಮತ್ತು ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿಯೂ ಕ್ರಮ ಕೈಗೊಳ್ಳಲಾಯಿತು.

ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಲಿನಸಂಪಳ್ಳಿ ಗ್ರಾಮದಲ್ಲಿ ಸುಮಾರು ₹6.5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಮನೆಯನ್ನು ಬುಧವಾರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸರ್ಕಾರದಿಂದ ₹2 ಲಕ್ಷ ಅನುದಾನ, ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಆರಂಭಿಕ ಹಂತದಲ್ಲಿ ನೀಡಿದ ₹50 ಸಾವಿರ ನೆರವು, ಗ್ರಾಮಸ್ಥರ ದೇಣಿಗೆ ಹಾಗೂ ಆಸರೆ ಸಮಿತಿಯ ಸದಸ್ಯರ ಸಹಕಾರದಿಂದ ಮನೆ ನಿರ್ಮಾಣ ಕಾರ್ಯ ಪೂರ್ಣಗೊಂಡಿತು.

ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಆಸರೆ ಸಮಿತಿ ಅಧ್ಯಕ್ಷ ಚಿದಂಬರ ಹೂವಿನಕೋಣೆ, “ಸುದ್ದಿ ವರದಿಯ ಮೂಲಕ ಕುಟುಂಬದ ದುಸ್ಥಿತಿ ತಿಳಿದುಬಂದ ಬಳಿಕ ಶಾಸಕರ ಗಮನಕ್ಕೆ ತಂದೆವು. ತಕ್ಷಣ ಸ್ಪಂದಿಸಿದ ಅವರು ನೆರವು ನೀಡಿದರು. ಗ್ರಾಮಸ್ಥರ ಸಹಕಾರದಿಂದ ಇಂದು ಈ ಕುಟುಂಬಕ್ಕೆ ಶಾಶ್ವತ ಸೂರು ಕಲ್ಪಿಸಲು ಸಾಧ್ಯವಾಗಿದೆ” ಎಂದು ಹೇಳಿದರು.

ಶಾಸಕರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ, ಆಸರೆ ಸಮಿತಿ ಸದಸ್ಯರಾದ ದೀಪಿಕಾ, ಅವಿನಾಶ್, ಚಿನ್ನಪ್ಪ, ಕೃಷ್ಣಮೂರ್ತಿ, ನಾರಾಯಣಪ್ಪ ಹಾಗೂ ಗ್ರಾಮಸ್ಥರಾದ ರವಿ, ನಾಗರಾಜ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಒಟ್ಟಾರೆಯಾಗಿ, ಪೋಸ್ಟ್ ಮ್ಯಾನ್ ನ್ಯೂಸ್‌ನಲ್ಲಿ ಪ್ರಕಟವಾದ ಒಂದು ವರದಿ, ನಿರ್ಗತಿಕ ಕುಟುಂಬದ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಸಮಾಜಮುಖಿ ಪತ್ರಿಕೋದ್ಯಮದ ಮಹತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಶಿಕ್ಷಣ ಸೇವೆಗೆ ಸಂದ ಪ್ರತಿಷ್ಠಿತ ಗೌರವ; ಅರಸಾಳಿನ ಸುಮಾ ಎಸ್.ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ Summa S.…

2 hours ago

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

6 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

8 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

20 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

20 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

23 hours ago