Headlines

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

GridArt 20260609

₹4.50 ಲಕ್ಷ ಮೌಲ್ಯದ ಅಡಿಕೆ ಕಳ್ಳತನ ಪ್ರಕರಣ : ಶಿಗ್ಗಾಂವ್ ಮೂಲದ ಇಬ್ಬರು ಆರೋಪಿಗಳ ಬಂಧನ

Thirthahalli police solved an arecanut theft case in Ranjadakatte and arrested two accused from Shiggaon. Around 9 quintals of arecanut worth ₹4.5 lakh and the vehicle used in the crime were recovered.

ತೀರ್ಥಹಳ್ಳಿ: ಸಮೀಪದ ರಂಜದಕಟ್ಟೆಯಲ್ಲಿ ನಡೆದಿದ್ದ ಅಡಿಕೆ ಕಳ್ಳತನ ಪ್ರಕರಣವನ್ನು ತೀರ್ಥಹಳ್ಳಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದ ಮೆಹಬೂಬ್ ಸಾಬ್ ಹಾಗೂ ಖಾಸಿಂ ಸಾಬ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕಳ್ಳತನಕ್ಕೆ ಬಳಸಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು ₹4.50 ಲಕ್ಷ ಮೌಲ್ಯದ 9 ಕ್ವಿಂಟಾಲ್ ಅಡಿಕೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮೇ 4ರಂದು ರಂಜದಕಟ್ಟೆಯ ಅಡಿಕೆ ವ್ಯಾಪಾರಿ ಅಶ್ರಫ್ ಅವರ ಮನೆಯಲ್ಲಿ ಅಡಿಕೆ ಕಳ್ಳತನ ನಡೆದಿತ್ತು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.