GOOD NEWS: ಗ್ರಾಮೀಣ ಜನರಿಗೆ ಭರ್ಜರಿ ಸಿಹಿಸುದ್ದಿ; ಇನ್ಮುಂದೆ ಗ್ರಾಮ ಪಂಚಾಯತಿಯಲ್ಲೇ ಸಿಗಲಿದೆ ವಾಸ ಸ್ಥಳ ಪ್ರಮಾಣ ಪತ್ರ!
Karnataka Government has empowered Gram Panchayat PDOs to issue Residence Certificates locally. Rural citizens can now obtain the document free of cost through Bapuji Seva Kendras without visiting taluk offices.
ಬೆಂಗಳೂರು, ಜೂನ್ 20: ಗ್ರಾಮೀಣ ಪ್ರದೇಶದ ನಾಗರಿಕರು ವಾಸಸ್ಥಳ ಪ್ರಮಾಣ ಪತ್ರ (Residence Certificate) ಪಡೆಯಲು ಹೋಬಳಿ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಅಲೆದಾಡಬೇಕಾದ ಅವಶ್ಯಕತೆ ಇನ್ನು ಮುಂದೆ ಇರುವುದಿಲ್ಲ. ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಸುಧಾರಣೆಯ ಭಾಗವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ವಾಸಸ್ಥಳ ದೃಢೀಕರಣ ಪತ್ರ ವಿತರಿಸಲು ಅನುಮತಿ ನೀಡಿದೆ.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಜೂನ್ 13ರಂದು ನಡೆದ ಉನ್ನತ ಮಟ್ಟದ ಸಭೆಯ ನಿರ್ದೇಶನದಂತೆ ಈ ಕ್ರಮ ಜಾರಿಗೊಂಡಿದ್ದು, ಗ್ರಾಮ ಪಂಚಾಯಿತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಾಸಸ್ಥಳ ದೃಢೀಕರಣ ಪತ್ರ ನೀಡುವ ಅಧಿಕಾರವನ್ನು ಸರ್ಕಾರ ಹಸ್ತಾಂತರಿಸಿದೆ.
ಈ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ಗ್ರಾಮದಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳ ಮೂಲಕವೇ ಅರ್ಜಿ ಸಲ್ಲಿಸಿ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ಇದರಿಂದ ಸಾರ್ವಜನಿಕರ ಸಮಯ ಮತ್ತು ವೆಚ್ಚ ಉಳಿತಾಯವಾಗುವ ನಿರೀಕ್ಷೆಯಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊರಡಿಸಿರುವ ಆದೇಶ ಸಂಖ್ಯೆ RDPR 599 GPA 2026 ಅನ್ವಯ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರ್ಹ ನಿವಾಸಿಗಳಿಗೆ ಅಭಿಯಾನ ಮಾದರಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಪ್ರಮಾಣ ಪತ್ರ ವಿತರಿಸಲು ಸೂಚಿಸಲಾಗಿದೆ.
ಪ್ರಕ್ರಿಯೆಯನ್ನು ಸುಗಮಗೊಳಿಸಲು ಈಗಾಗಲೇ ಬಳಕೆಯಲ್ಲಿರುವ ‘ಅಟಲ್ ಜೀ ಜನಸ್ನೇಹಿ ಕೇಂದ್ರ’ ತಂತ್ರಾಂಶವನ್ನು ಬಳಸಲಾಗುತ್ತದೆ. ಅಲ್ಲದೆ, ಈ ಸೇವೆಗೆ ಯಾವುದೇ ರೀತಿಯ ಶುಲ್ಕ ವಿಧಿಸಬಾರದು ಎಂದು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ.
ಈ ಆದೇಶದ ಅನುಷ್ಠಾನಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಗಳ ಪಿಡಿಒಗಳಿಗೆ ಜ್ಞಾಪನಾ ಪತ್ರದ ಪ್ರತಿಗಳನ್ನು ಕಳುಹಿಸಲಾಗಿದೆ. ಅಗತ್ಯ ದಾಖಲೆಗಳು ಮತ್ತು ಅರ್ಜಿ ಸಲ್ಲಿಕೆ ವಿಧಾನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.
ಸರ್ಕಾರದ ಈ ಕ್ರಮದಿಂದ ಕೃಷಿ, ಶಿಕ್ಷಣ, ವಿದ್ಯಾರ್ಥಿವೇತನ, ಸರ್ಕಾರಿ ಯೋಜನೆಗಳು ಸೇರಿದಂತೆ ವಿವಿಧ ಉದ್ದೇಶಗಳಿಗೆ ಅಗತ್ಯವಾಗುವ ವಾಸಸ್ಥಳ ಪ್ರಮಾಣ ಪತ್ರವನ್ನು ಗ್ರಾಮ ಮಟ್ಟದಲ್ಲೇ ಸುಲಭವಾಗಿ ಪಡೆಯಲು ಸಾಧ್ಯವಾಗಲಿದೆ. ಇದರಿಂದ ಗ್ರಾಮೀಣ ಜನರಿಗೆ ಆಡಳಿತಾತ್ಮಕ ಸೇವೆಗಳು ಮತ್ತಷ್ಟು ಹತ್ತಿರವಾಗಲಿವೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…