ರಿಪ್ಪನ್ ಪೇಟೆ ಸಮೀಪ ಭೀಕರ ರಸ್ತೆ ಅಪಘಾತ: ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ, ಶಿವಮೊಗ್ಗಕ್ಕೆ ರವಾನೆ
More than ten people were injured in a serious road accident near Baluru, close to Ripponpet, after a collision between a Bolero pickup and a Canter lorry. The injured were shifted to Shivamogga for treatment.
ರಿಪ್ಪನ್ ಪೇಟೆ : ಸಮೀಪದ ಬಾಳೂರು ಬಳಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬೊಲೆರೋ ಪಿಕಪ್ ವಾಹನ ಮತ್ತು ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯ ತೀವ್ರತೆಗೆ ಬೊಲೆರೋ ವಾಹನದ ಮುಂಭಾಗ ಜಖಂಗೊಂಡಿವೆ.
ಮಾಹಿತಿಯ ಪ್ರಕಾರ, ಶಿಕಾರಿಪುರ ತಾಲೂಕಿನ ಓತಿನಕಟ್ಟೆ ಗ್ರಾಮದವರನ್ನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನವು ರಿಪ್ಪನ್ ಪೇಟೆ- ಆನಂದಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಗಾಯಗೊಂಡವರನ್ನು ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರವನ್ನು ಸುಗಮಗೊಳಿಸುವ ಕಾರ್ಯ ಕೈಗೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಘಟನೆಯಿಂದಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗಾಯಾಳುಗಳ ಗುರುತು ಹಾಗೂ ಅಪಘಾತದ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…
ಸಾಗರ: ಕಸ್ತೂರಿ ರಂಗನ್ ವರದಿ ವಿರುದ್ಧ ರೈತರ ಆಕ್ರೋಶ; ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನೆ Farmers staged a massive protest…
ಇಂಡಿಯಾ ಪೋಸ್ಟ್‌ನಲ್ಲಿ 25,000ಕ್ಕೂ ಹೆಚ್ಚು ಹುದ್ದೆ: 10ನೇ ತರಗತಿ ಪಾಸಾದವರಿಗೆ ಅವಕಾಶ, ಪರೀಕ್ಷೆ ಇಲ್ಲದೆ ನೇಮಕಾತಿ India Post GDS…