ರಿಪ್ಪನ್ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!
Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control.
ರಿಪ್ಪನ್ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮಧ್ಯರಾತ್ರಿ ವೇಳೆ ಸಂಚರಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ ಅರ್ಧಕ್ಕೂ ಹೆಚ್ಚು ಮೊಟ್ಟೆಗಳು ಒಡೆದು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿವೆ. ಘಟನೆಯಿಂದ ವಾಹನಕ್ಕೂ ಹಾನಿಯಾಗಿದ್ದು, ಮೊಟ್ಟೆಗಳ ನಷ್ಟವು ಗಮನಾರ್ಹ ಪ್ರಮಾಣದಲ್ಲಿದೆ.
ಅದೃಷ್ಟವಶಾತ್, ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ರಾತ್ರಿ ಸಮಯದಲ್ಲಿ ವಾಹನ ಸಂಚಾರ ಕಡಿಮೆಯಿದ್ದ ಕಾರಣ ಮತ್ತಷ್ಟು ಅನಾಹುತ ಸಂಭವಿಸುವುದು ತಪ್ಪಿದೆ.
ಪಲ್ಟಿಯಾದ ವಾಹನವು ಕುಂದಾಪುರದ ನಿವಾಸಿ ರಹಮತ್ತುಲ್ಲಾ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟವರು ಸ್ಥಳಕ್ಕೆ ಆಗಮಿಸಿ ವಾಹನವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. ರಸ್ತೆಯ ಮೇಲೆ ಹರಡಿದ್ದ ಒಡೆದ ಮೊಟ್ಟೆಗಳನ್ನು ತೆರವುಗೊಳಿಸಲಾಗುತಿದ್ದು , ಸಾವಿರಾರು ಮೊಟ್ಟೆಗಳೂ ಒಡೆದು ಸಾಕಷ್ಟು ಹಾನಿಯಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್