POSTMAN NEWS

ನೈಜ ಸುದ್ದಿ ನೇರ ಬಿತ್ತರ..

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

GridArt 20260601

RIPPONPETE | ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ; ಯುವಕನಿಗೆ ಗಂಭೀರ ಗಾಯ, ಶಿವಮೊಗ್ಗಕ್ಕೆ ರವಾನೆ

A head-on collision between two motorcycles near Jyothi Mangalya Mandir on Thirthahalli Road in Ripponpet left a youth seriously injured. The victim was shifted to McGann Hospital, Shivamogga for advanced treatment.

ರಿಪ್ಪನ್ ಪೇಟೆ, ಜೂನ್ 1: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಸಮೀಪ ಭಾನುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ರಾಯಲ್ ಎನ್‌ಫೀಲ್ಡ್ ಬೈಕ್‌ನಲ್ಲಿ ರಿಪ್ಪನ್ ಪೇಟೆ ಸಮೀಪದ ಅಡಿಕಟ್ಟು ಗ್ರಾಮದ ನಿವಾಸಿ ರೋಹನ್ ಅವರು ಬರುತ್ತಿದ್ದ ವೇಳೆ, ರಿಪ್ಪನ್ ಪೇಟೆಯಿಂದ ಕರಡಿಗ ಗ್ರಾಮದ ಕಡೆಗೆ ಹಿರೋ ಹೋಂಡಾ ಸ್ಪ್ಲೆಂಡರ್ ಬೈಕ್‌ನಲ್ಲಿ ತೆರಳುತ್ತಿದ್ದ ಓಂಕೇಶಪ್ಪ ಅವರ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ಬೈಕ್‌ಗಳು ರಸ್ತೆಯ ಮೇಲೆ ಚದರಿಹೋಗಿದ್ದು, ಬೈಕ್ ಸವಾರ ರೋಹನ್ ಅವರ ಬಲಗಾಲಿಗೆ ಗಂಭೀರ ಗಾಯಗಳಾಗಿವೆ. ಅಪಘಾತದ ತಕ್ಷಣ ಸ್ಥಳೀಯರು ಗಾಯಾಳುವಿಗೆ ನೆರವು ನೀಡಿ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದರು. ಅಲ್ಲಿ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಇನ್ನೊಬ್ಬ ಬೈಕ್ ಸವಾರ ಓಂಕೇಶಪ್ಪ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.