Categories: crime news

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ವೈರಲ್: ತೀರ್ಥಹಳ್ಳಿಯ ಓರ್ವ ಸೇರಿದಂತೆ ಮೂವರು ಅರೆಸ್ಟ್

Bengaluru Cyber Command Police arrested three educated professionals, including a software engineer, for creating and circulating obscene deepfake photos and videos of actress Rukmini Vasanth using AI technology.

ಬೆಂಗಳೂರು, ಜೂನ್ 21: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಸ್ಯಾಂಡಲ್‌ವುಡ್ ನಟಿ ರುಕ್ಮಿಣಿ ವಸಂತ್ ಅವರ ಅಶ್ಲೀಲ ಡೀಪ್‌ಫೇಕ್ (Deepfake) ಫೋಟೋ ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರು ಸೈಬರ್ ಅಪರಾಧಿಗಳನ್ನು ಬೆಂಗಳೂರಿನ ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಾಗಲಕೋಟೆಯ ರವಿಕುಮಾರ್ (24), ಬೆಂಗಳೂರಿನ ರಂಜಿತ್ ಕುಮಾರ್ (25) ಹಾಗೂ ತೀರ್ಥಹಳ್ಳಿ ಮೂಲದ ಚಂದ್ರಕಾಂತ್ (33) ಎಂದು ಗುರುತಿಸಲಾಗಿದೆ. ಆರೋಪಿಗಳ ಹಿನ್ನೆಲೆ ಪರಿಶೀಲಿಸಿದ ವೇಳೆ ಅವರು ಸುಶಿಕ್ಷಿತರು ಹಾಗೂ ಸಮಾಜದಲ್ಲಿ ಉತ್ತಮ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಪೊಲೀಸರನ್ನೇ ಅಚ್ಚರಿಗೊಳಿಸಿದೆ.

ಮೊದಲ ಆರೋಪಿ ರವಿಕುಮಾರ್ ಬಿಎಸ್‌ಸಿ ನರ್ಸಿಂಗ್ ಪದವೀಧರನಾಗಿದ್ದು, ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದನು. ಇತ್ತೀಚೆಗೆ ಯೂಟ್ಯೂಬ್ ಮೂಲಕ ಮೊದಲ ಆದಾಯ ಪಡೆದಿದ್ದ ಆತ, ಹೆಚ್ಚಿನ ವೀಕ್ಷಣೆ ಮತ್ತು ವೇಗವಾಗಿ ಹಣ ಗಳಿಸುವ ಉದ್ದೇಶದಿಂದ ನಟಿಯರ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸಿ ಅಪ್‌ಲೋಡ್ ಮಾಡಲು ಆರಂಭಿಸಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಎರಡನೇ ಆರೋಪಿ ರಂಜಿತ್ ಕುಮಾರ್ ವಾರ್ಷಿಕ ಸುಮಾರು ₹20 ಲಕ್ಷ ಸಂಬಳ ಪಡೆಯುವ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾನೆ. ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿದ್ದ ಆತ ಕೇವಲ ಮನರಂಜನೆ ಮತ್ತು ಕುತೂಹಲಕ್ಕಾಗಿ ಪ್ರಮುಖ ನಟಿಯರ ಎಐ ಆಧಾರಿತ ಡೀಪ್‌ಫೇಕ್ ವಿಡಿಯೋಗಳನ್ನು ಸೃಷ್ಟಿಸುತ್ತಿದ್ದುದಾಗಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಮೂರನೇ ಆರೋಪಿ ಚಂದ್ರಕಾಂತ್ ಬೆಂಗಳೂರಿನ ಪ್ರತಿಷ್ಠಿತ ಚಾರ್ಟೆಡ್ ಅಕೌಂಟೆಂಟ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದು, ಉತ್ತಮ ಸಂಬಳ ಪಡೆಯುತ್ತಿದ್ದರೂ ವಿಕೃತ ಮನೋಭಾವದಿಂದ ನಟಿಯರ ಚಿತ್ರಗಳನ್ನು ಡೀಪ್‌ಫೇಕ್ ಮಾಡುತ್ತಿದ್ದನು ಎಂದು ತನಿಖೆಯಿಂದ ಬೆಳಕಿಗೆ ಬಂದಿದೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ ಮೂರು ಹೈ-ಎಂಡ್ ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಐ ಆಧಾರಿತ ಆ್ಯಪ್‌ಗಳು ಹಾಗೂ ಸಾಫ್ಟ್‌ವೇರ್‌ಗಳ ಮೂಲಕ ನಟಿಯರ ಮುಖಗಳನ್ನು ಅಶ್ಲೀಲ ವಿಡಿಯೋಗಳಿಗೆ ಅಳವಡಿಸಿ ನಕಲಿ ವಿಷಯಗಳನ್ನು ಸೃಷ್ಟಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಸೈಬರ್ ಕಮಾಂಡ್ ಪೊಲೀಸರು ತಮ್ಮ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸುಶಿಕ್ಷಿತ ವ್ಯಕ್ತಿಗಳೇ ಇಂತಹ ಸೈಬರ್ ಅಪರಾಧಗಳಲ್ಲಿ ತೊಡಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

19 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

23 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago