Headlines

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

ಆನಂದಪುರ ಬಳಿಯಲ್ಲಿ ಭೀಕರ ರಸ್ತೆ ಅಪಘಾತ :ಓರ್ವಯುವಕ ಸಾವು , ಹಲವರು ಗಂಭೀರ !

A fatal road accident near Nedaravalli in Sagar taluk claimed the life of a 29-year-old man after a collision between a tractor and a car. Several others sustained serious injuries and were hospitalized.

ಸಾಗರ: ತಾಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಲ್ಪಾಡಿಯಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಶ್ರೀನಿವಾಸ್ (29) ಎಂಬ ಯುವಕ ಮೃತಪಟ್ಟಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಕಾರಿನಲ್ಲಿದ್ದ ಇತರ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಾಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

About The Author