A 19-year-old youth from Sakleshpur allegedly died by sui *cide after jumping into Purale Lake near Shivamogga. The body was found floating in the lake three days after the incident, and police have launched an investigation.
ಶಿವಮೊಗ್ಗ: ಹಾಸನ ಜಿಲ್ಲೆಯ ಸಕಲೇಶಪುರ ಮೂಲದ 19 ವರ್ಷದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮ*ಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು ಸಕಲೇಶಪುರದ ಸಂಕೇತ್ ಎಂದು ಗುರುತಿಸಲಾಗಿದೆ.
ಸಂಕೇತ್ ಇತ್ತೀಚೆಗಷ್ಟೇ ಐಟಿಐ ವ್ಯಾಸಂಗ ಪೂರ್ಣಗೊಳಿಸಿದ್ದನು. ಆದರೆ, ಯಾವುದೇ ಉದ್ಯೋಗಕ್ಕೆ ಸೇರದೆ ಮನೆಯಲ್ಲೇ ಇದ್ದ ಹಿನ್ನೆಲೆಯಲ್ಲಿ ಆತನ ತಂದೆ ಕೆಲಸಕ್ಕೆ ಹೋಗುವಂತೆ ಬುದ್ದಿವಾದ ಹೇಳಿದ್ದರು ಎಂದು ತಿಳಿದುಬಂದಿದೆ.
ಈ ವಿಚಾರಕ್ಕೆ ಮನನೊಂದು ಸಂಕೇತ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸುಮಾರು ಮೂರು ದಿನಗಳ ಹಿಂದೆಯೇ ನಡೆದಿರಬಹುದು ಎಂದು ಹೇಳಲಾಗಿದ್ದು, ಸೋಮವಾರ ಪುರಲೆ ಕೆರೆಯಲ್ಲಿ ಯುವಕನ ಶವ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಹೊರತೆಗೆದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್