POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

GridArt 20260618

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026.

ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾಗುವ ಪಶುವೈದ್ಯರು ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವುದರ ಜೊತೆಗೆ, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಮೃತಪಟ್ಟ ವನ್ಯಪ್ರಾಣಿಗಳ ಮರಣೋತ್ತರ ಪರೀಕ್ಷೆ, ವನ್ಯಜೀವಿ-ಮಾನವ ಸಂಘರ್ಷದ ಸಂದರ್ಭಗಳಲ್ಲಿ ತುರ್ತು ಚಿಕಿತ್ಸಾ ಮತ್ತು ರಕ್ಷಣಾ ಕಾರ್ಯಗಳು, ವನ್ಯಪ್ರಾಣಿಗಳ ಸ್ಥಳಾಂತರ ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕಾಗುತ್ತದೆ.

ಅಭ್ಯರ್ಥಿಗಳು Bachelor of Veterinary Science & Animal Husbandry (B.V.Sc & A.H.) ಪದವಿಯನ್ನು ಹೊಂದಿರಬೇಕು. ಜೊತೆಗೆ ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಅಥವಾ ಮೃಗಾಲಯ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ ಪಡೆದಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಅಗತ್ಯ ದಾಖಲೆಗಳನ್ನು ಜುಲೈ 2, 2026ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಶಿವಮೊಗ್ಗದ ವನ್ಯಜೀವಿ ವಿಭಾಗದ ಕಚೇರಿಗೆ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳಿಗಾಗಿ ಜುಲೈ 6, 2026ರಂದು ನೇರ ಸಂದರ್ಶನ ನಡೆಯಲಿದೆ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಕ್ರೆಬೈಲು ಆನೆ ಬಿಡಾರ ವೆಬ್‌ಸೈಟ್ ಅಥವಾ ಶಿವಮೊಗ್ಗ ವನ್ಯಜೀವಿ ವಿಭಾಗದ ಕಚೇರಿಯನ್ನು ಸಂಪರ್ಕಿಸಬಹುದು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.