w
Headlines
Home » ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

GridArt 20260626

ಶರಾವತಿ ಜಲವಿದ್ಯುತ್ ಕೇಂದ್ರದಲ್ಲಿ ಪೈಪ್ ಲೀಕೇಜ್: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Water leakage was reported in the penstock drain pipe of Unit-7 at Sharavathi Hydroelectric Power Station near Sagar. Prompt action by officials prevented a major mishap, and operations at three units were temporarily halted.

ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯ ವ್ಯಾಪ್ತಿಯಲ್ಲಿರುವ ಶರಾವತಿ ಜಲವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಪೆನ್‌ಸ್ಟಾಕ್ ಕೊಳವೆ ಮಾರ್ಗದ ಡ್ರೈನ್ ಪೈಪ್‌ನಲ್ಲಿ ಹಠಾತ್ ನೀರು ಸೋರಿಕೆ ಉಂಟಾದ ಘಟನೆ ಶುಕ್ರವಾರ ನಡೆದಿದೆ.

ಘಟಕ–7ರ ಪೆನ್‌ಸ್ಟಾಕ್ ಕೊಳವೆ ಮಾರ್ಗದಲ್ಲಿ ನೀರು ಸೋರಿಕೆ ಕಾಣಿಸಿಕೊಂಡ ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿದ್ಯುದಾಗಾರದ ಮೂರು ಘಟಕಗಳ ಕಾರ್ಯಾಚರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಈ ಕುರಿತು ಶರಾವತಿ ಚಾಲನೆ ಮತ್ತು ಪಾಲನೆ ವಿಭಾಗದ ಮುಖ್ಯ ಅಭಿಯಂತರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ನೀರು ಸೋರಿಕೆ ಪ್ರಕರಣವನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ವಿದ್ಯುತ್ ಜಾಲಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯುತ್ ಸರಬರಾಜಿನ ಮೇಲೂ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.