ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬಲೆ: ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
Police arrested two alleged drug peddlers near Yatri Nivasa and seized 658 grams of ganja worth ₹15,000 during a raid based on credible information.
ಶಿಕಾರಿಪುರ : ಶಿಕಾರಿಪುರ ಟೌನ್ ವ್ಯಾಪ್ತಿಯ ಯಾತ್ರಿ ನಿವಾಸದ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಶಿಕಾರಿಪುರ ಟೌನ್ ಪೊಲೀಸರು ಬಂಧಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಆರೋಪಿಗಳಿಂದ ಸುಮಾರು ₹15,000 ಮೌಲ್ಯದ 658 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಜೂನ್ 17ರಂದು ಯಾತ್ರಿ ನಿವಾಸಕ್ಕೆ ತೆರಳುವ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಮಾಹಿತಿ ಆಧರಿಸಿ ಶಿಕಾರಿಪುರ ಟೌನ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿ ತಂಡ ದಿಢೀರ್ ದಾಳಿ ನಡೆಸಿದ್ದು, ಸ್ಥಳದಲ್ಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿಗಳನ್ನು 32 ವರ್ಷದ ಸುನೀಲ್ ನಾಯ್ಡು ಹಾಗೂ 30 ವರ್ಷದ ಸುನೀಲ್ ಟಿ.ವಿ. ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ರೆಡ್ಹ್ಯಾಂಡ್ ಆಗಿ ಸೆರೆಹಿಡಿದಿದ್ದಾರೆ.
ಪೊಲೀಸರು ಆರೋಪಿಗಳ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್