ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ
Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment.
ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಲಭ್ಯ ಮಾಹಿತಿಯ ಪ್ರಕಾರ, ಟಿಟಿ ವಾಹನವನ್ನು ಚಾಲಕ ನಾಗರಾಜ ಬಾರಕಿ ಅತಿವೇಗವಾಗಿ ಚಲಾಯಿಸುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕಾರೊಂದನ್ನು ತಪ್ಪಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನದ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಬದಿಗೆ ಪಲ್ಟಿಯಾಗಿದೆ.
ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಪಾರವ್ವ, ಪುಷ್ಪ ಹಾಗೂ ಮಲ್ಲೇಶಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಲಲಿತಾ, ಅವರ ಪತಿ ಶಿವಪ್ಪ, ಪುತ್ರ ಸಂದೀಪ್, ರತ್ನಮ್ಮ, ಹೊನ್ನಮ್ಮ, ಮಂಜುನಾಥ್ ಗೌಡ ಹಾಗೂ ಮಲ್ಲನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, 108 ಆಂಬುಲೆನ್ಸ್ ಮೂಲಕ ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…