ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು
Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements.
ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು.
ಕಾರ್ಯಾಚರಣೆಯ ವೇಳೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುತ್ತಿದ್ದವರು ಹಾಗೂ ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 51 ಪ್ರಕರಣಗಳನ್ನು ದಾಖಲಿಸಿ ₹4,500 ದಂಡ ವಸೂಲಿ ಮಾಡಲಾಗಿದೆ.
ಇದೇ ವೇಳೆ ಬಸ್ ನಿಲ್ದಾಣದ ಸುತ್ತಮುತ್ತಲಿನ ಅಂಗಡಿ-ಮುಂಗಟ್ಟುಗಳಲ್ಲಿ ಅಳವಡಿಸಲಾಗಿದ್ದ ಕಾನೂನುಬಾಹಿರ ತಂಬಾಕು ಜಾಹೀರಾತು ಫಲಕಗಳನ್ನು ಅಧಿಕಾರಿಗಳು ತೆರವುಗೊಳಿಸಿದರು.
ದಾಳಿ ವೇಳೆ ತಂಬಾಕು ಮಾರಾಟಗಾರರು ಮತ್ತು ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಹಾನಿ, ಕೋಟ್ಪಾ ಕಾಯ್ದೆಯ ನಿಯಮಗಳು ಹಾಗೂ ಕಾನೂನು ಉಲ್ಲಂಘನೆಯ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ರವಿರಾಜ್, ಪ್ರವೀಣ್, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…
ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…
ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…
30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…
ಹುಂಚ ಹೋಬಳಿ ಕಾಂಗ್ರೆಸ್ OBC ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ Ramesh H.B. has been appointed as the…
ರಿಪ್ಪನ್‌ಪೇಟೆ, ಹರತಾಳು, ಗರ್ತಿಕೆರೆಯಲ್ಲಿ ರಾಯರ 355ನೇ ಆರಾಧನೆ; ಹರಿದು ಬಂದ ಭಕ್ತ ಸಾಗರ Thousands of devotees participated in…