POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

GridArt 20260621

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act.

ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕ ಹಾಗೂ ಆತನ ಕೃತ್ಯಕ್ಕೆ ಸಹಕಾರ ನೀಡಿದ್ದ ಮೂವರು ಸಂಬಂಧಿಕರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ನ್ಯಾಯಾಲಯವು ಅಪರಾಧಿಗಳಿಗೆ ಒಟ್ಟು 1.85 ಲಕ್ಷ ರೂ. ದಂಡ ವಿಧಿಸಿದ್ದು, ನೊಂದ ಬಾಲಕಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ನ್ಯಾಯಾಧೀಶ ನಿಂಗನಗೌಡ ಭ. ಪಾಟೀಲ್ ಅವರು ಜೂನ್ 20ರಂದು ತೀರ್ಪು ಪ್ರಕಟಿಸಿದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಹೆಚ್.ಆರ್. ವಾದ ಮಂಡಿಸಿದ್ದರು.

ಪ್ರಕರಣದ ವಿವರಗಳ ಪ್ರಕಾರ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2024ರಲ್ಲಿ ಈ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ 27 ವರ್ಷದ ಯುವಕನು ಆಕೆಯನ್ನು ವಿವಾಹವಾಗಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ಕೃತ್ಯಕ್ಕೆ ಆತನ ಮೂವರು ಸಂಬಂಧಿಕರು ಸಹಕಾರ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಕುಂಸಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.