w
Headlines
Home » ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

WhatsApp Image 2025 06 12 at 10.17.06 AM

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office.

ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ (DAR) ಕಚೇರಿ, ಸಾಗರ ರಸ್ತೆಯಲ್ಲಿ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‌ನ ನಕಲು ಪ್ರತಿಯನ್ನು ಲಗತ್ತಿಸಿ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಸಮೀಪದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯನ್ನು ಸಂಪರ್ಕಿಸಬಹುದು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.