Headlines

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises.

ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ ಆವರಣದಲ್ಲಿ ವ್ಯಾಪಕ ತಪಾಸಣೆ ನಡೆಸಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (PDJ) ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಮಾಹಿತಿ ಲಭ್ಯವಾಗಿದ್ದು, ತಕ್ಷಣವೇ ಈ ಬಗ್ಗೆ ಜಯನಗರ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಲಾಗಿದೆ.

ಬೆದರಿಕೆ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಭದ್ರತಾ ವಲಯವಾಗಿ ಪರಿವರ್ತಿಸಿ ಪರಿಶೀಲನೆ ಆರಂಭಿಸಿದರು. ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದ ಸಹಾಯದಿಂದ ನ್ಯಾಯಾಲಯದ ಕಟ್ಟಡ, ವಾಹನ ನಿಲುಗಡೆ ಪ್ರದೇಶ ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಕೂಲಂಕಷ ತಪಾಸಣೆ ನಡೆಸಲಾಗಿದೆ.

ಸದ್ಯ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿಲ್ಲ. ಬೆದರಿಕೆ ಇಮೇಲ್ ಕಳುಹಿಸಿದವರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

About The Author

Exit mobile version