ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

ಸಿಗರೇಟ್ ಇಲ್ಲ ಎಂದಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ; ಆರೋಪಿಗಳಿಗಾಗಿ ಪೊಲೀಸರ ಬಲೆ

An elderly woman running a petty shop in Shivamogga was allegedly assaulted and threatened by two youths after she informed them that cigarettes were out of stock. Police have registered a case and launched a search for the accused.

ಶಿವಮೊಗ್ಗ: ಸಿಗರೇಟ್ ಕೇಳಿದ ವೇಳೆ ಅಂಗಡಿಯಲ್ಲಿ ಸ್ಟಾಕ್ ಇಲ್ಲ ಎಂದು ತಿಳಿಸಿದ್ದಕ್ಕೆ ಸಿಟ್ಟಾದ ಇಬ್ಬರು ಯುವಕರು ವೃದ್ಧೆಯೊಬ್ಬರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.

ಈ ಸಂಬಂಧ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

ತುಂಗಾನಗರ ಪ್ರದೇಶದಲ್ಲಿ ವೃದ್ಧೆಯೊಬ್ಬರು ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದು, ಅಂಗಡಿಗೆ ಬಂದ ಇಬ್ಬರು ಅಪರಿಚಿತ ಯುವಕರು ಸಿಗರೇಟ್ ಇದೆಯೇ ಎಂದು ವಿಚಾರಿಸಿದ್ದಾರೆ. ಇದಕ್ಕೆ ವೃದ್ಧೆ ಸಿಗರೇಟ್ ಸ್ಟಾಕ್ ಖಾಲಿಯಾಗಿದ್ದು, ಸದ್ಯ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಯುವಕರು, “ಸಿಗರೇಟ್ ಇಲ್ಲದಿದ್ದರೆ ಅಂಗಡಿ ಏಕೆ ಇಟ್ಟಿದ್ದೀಯಾ?” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಬಳಿಕ ವೃದ್ಧೆಯನ್ನು ತಳ್ಳಿ ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿದೆ.

ಅಷ್ಟೇ ಅಲ್ಲದೆ, ಇನ್ನು ಮುಂದೆ ಅಂಗಡಿ ಹೇಗೆ ನಡೆಸುತ್ತೀಯೋ ನೋಡೋಣ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ತುಂಗಾನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್

ಶಿವಮೊಗ್ಗದಲ್ಲಿ ರೌಡಿಶೀಟರ್ ‘ಕುಳ್ಳಿ ಕಿರಣ್’ ಬರ್ಬರ ಹತ್ಯೆ; ಪ್ರಮುಖ ಆರೋಪಿ ಉಮೇಶ್ ಮೇಲೆ ಪೊಲೀಸ್ ಫೈರಿಂಗ್ Shivamogga rowdy sheeter…

2 hours ago

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ

ಜಂಬಳ್ಳಿ ಅರಣ್ಯದಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಕುಡುಮಲ್ಲಿಗೆ ಸೊಸೈಟಿ ಸಿಇಒ ಮದನ್ ಸುರಕ್ಷಿತ ಪತ್ತೆ Kudumallige Society CEO Madan,…

2 hours ago

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

17 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

17 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

24 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago