ಸಿಕ್ಕ ಚಿನ್ನದ ಸರದ ವಿಚಾರದಲ್ಲಿ ಕಿರಿಕ್ – ಗರ್ಭಿಣಿ ಸೇರಿದಂತೆ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!
Four members of a family, including a pregnant woman, were injured in a deadly weapon attack following a dispute over a gold chain in Shivamogga’s Rajiv Gandhi Colony. The victims are undergoing treatment at McGann Hospital.
ಶಿವಮೊಗ್ಗ, ಜೂನ್ 26: ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಚಿನ್ನದ ಸರ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದ ತೀವ್ರ ಸ್ವರೂಪ ಪಡೆದು, ಗರ್ಭಿಣಿ ಮಹಿಳೆ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಮೇಲೆ ಚಾಕು ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹಲ್ಲೆಯಲ್ಲಿ ಗಾಯಗೊಂಡವರನ್ನು ಹಸೀನಾ (27), ಗರ್ಭಿಣಿ ಉಜ್ಮಾ (21), ಸಲ್ಮಾ (35) ಹಾಗೂ ಸೈಯದ್ ಶೇರು (25) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ರಾಜೀವ್ ಗಾಂಧಿ ಬಡಾವಣೆಯಲ್ಲಿ ಬುಧವಾರ ಚಿನ್ನದ ಚೈನ್ ಸಿಕ್ಕ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ಘಟನೆಯ ಮುಂದುವರಿದ ಭಾಗವಾಗಿ ಗುರುವಾರ ಅಬ್ಬು ಮತ್ತು ಯಾಸಿನ್ ನೇತೃತ್ವದ ಯುವಕರ ಗುಂಪು ಮನೆ ಬಳಿ ಬಂದು ಜಗಳ ಆರಂಭಿಸಿ, ಮನೆಯೊಳಗೆ ನುಗ್ಗಿ ಚಾಕು ಹಾಗೂ ಇತರೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ತನಿಖೆ ಮುಂದುವರಿಸಿದ್ದಾರೆ.
ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…
ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…
ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…
ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…
ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…
ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…