w
Headlines
Home » ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

ಅಂದರ್-ಬಾಹಾರ್ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

GridArt 20260602

ಅಂದರ್-ಬಾಹಾರ್ ಅಡ್ಡೆ ಮೇಲೆ ಪೊಲೀಸರ ದಾಳಿ; ನಗದು ಸಹಿತ 9 ಮಂದಿ ಅಂದರ್!

Shivamogga police raided an illegal Andar-Bahar gambling den operating in a house at Hosamane and arrested 9 persons. Cash, mobile phones, and playing cards were seized during the operation.

ಶಿವಮೊಗ್ಗ: ನಗರದ ಹೊಸಮನೆ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹಾರ್ ಇಸ್ಟೀಟ್ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು ದಿಢೀರ್ ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ.

ಜೂನ್ 1ರ ಸಂಜೆ ನಡೆದ ಈ ಕಾರ್ಯಾಚರಣೆಗೆ ಮುನ್ನ ಶಿವಮೊಗ್ಗ ಎ-ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಿಂದ ಸರ್ಚ್ ವಾರಂಟ್ ಪಡೆಯಲಾಗಿತ್ತು. ಬಳಿಕ ದೊಡ್ಡಪೇಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ದಾಳಿ ನಡೆಸಿತು.

ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಬಳಿಯಿಂದ ₹33,470 ನಗದು, 8 ಮೊಬೈಲ್ ಫೋನ್‌ಗಳು ಹಾಗೂ ಜೂಜಾಟಕ್ಕೆ ಬಳಸಲಾಗುತ್ತಿದ್ದ ಇಸ್ಟೀಟ್ ಕಾರ್ಡ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 200/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 79 ಮತ್ತು 80ರ ಪ್ರಕಾರ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.