w
Headlines
Home » ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

IMG 20260605 WA0016

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಿಹಿ ಹಂಚಿ NSUI ಸಂಭ್ರಮಾಚರಣೆ

NSUI workers and students in Shivamogga celebrated the Karnataka government’s announcement of free bus passes for school and college students by distributing sweets and expressing gratitude to Chief Minister D.K. Shivakumar.

ಶಿವಮೊಗ್ಗ, ಜೂನ್ 5: ರಾಜ್ಯ ಸರ್ಕಾರವು ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ನಗರದ ಮೀನಾಕ್ಷಿ ಭವನದ ಎದುರಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಲಾಯಿತು. ಸರ್ಕಾರದ ಈ ಮಹತ್ವದ ನಿರ್ಧಾರವನ್ನು ವಿದ್ಯಾರ್ಥಿಗಳು ಸ್ವಾಗತಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು. ಈ ವೇಳೆ ಮಾತನಾಡಿದ ವಿಜಯ್ ಕುಮಾರ್, ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆ ದೊಡ್ಡ ನೆರವಾಗಲಿದ್ದು, ಶಿಕ್ಷಣ ಮುಂದುವರಿಸಲು ಮತ್ತು ಆರ್ಥಿಕ ಹೊರೆ ಕಡಿಮೆ ಮಾಡಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಹೊರಬಿದ್ದ ಮೊದಲ ಪ್ರಮುಖ ಆದೇಶಗಳಲ್ಲಿ ಇದೂ ಒಂದಾಗಿದ್ದು, ವಿದ್ಯಾರ್ಥಿಗಳು ಅವರ ಭಾವಚಿತ್ರಗಳನ್ನು ಪ್ರದರ್ಶಿಸಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಎನ್‌ಎಸ್‌ಯುಐ ನಗರ ಅಧ್ಯಕ್ಷ ರವಿ, ನಗರ ಉಪಾಧ್ಯಕ್ಷ ಅಬ್ದುಲ್ ಸುಭಾನ್, ಆದಿತ್ಯ, ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಾಜಿ ರಾವ್, ವರುಣ್, ಯೂಸೂಫ್, ಶ್ರೀಕಾಂತ್, ಹಾಲಸ್ವಾಮಿ, ಮಹಾದೇವ ಹಿರೇಮಠ, ಜೀವಿತ್, ಶಶಿಕಲಾ, ಸೃಜನ್, ದೀಪಕ್, ಅಭಿಲಾಷ್, ಲೋಹಿತ್, ಚೇತನ್, ಅನಿರುದ್ಧ ಸೇರಿದಂತೆ ಹಲವರು ಭಾಗವಹಿಸಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.