w
Headlines
Home » ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

GridArt 20260612

ಶಿವಮೊಗ್ಗದಲ್ಲಿ ರೌಡಿಶೀಟರ್‌ನ ಭೀಕರ ಹತ್ಯೆ:  ಕೈ ಕತ್ತರಿಸಿ, ಮುಖ ಗುರುತು ಸಿಗದಂತೆ ಕೊಚ್ಚಿದ ದುಷ್ಕರ್ಮಿಗಳು

Rowdy-sheeter Narasimha, 39, was brutally hacked to death by unidentified assailants in Shivamogga’s Gandhi Bazaar area. Police suspect old rivalry behind the gruesome murder and have launched an intensive investigation.

ಶಿವಮೊಗ್ಗ: ನಗರದಲ್ಲಿ ಮತ್ತೊಮ್ಮೆ ರಕ್ತರಂಜಿತ ಘಟನೆ ನಡೆದಿದ್ದು, ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದಾರೆ. ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತನನ್ನು ಗೋವಿಂದಾಪುರ ಆಶ್ರಯ ಬಡಾವಣೆ ನಿವಾಸಿ ನರಸಿಂಹ (39) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ನರಸಿಂಹನನ್ನು ದುಷ್ಕರ್ಮಿಗಳು ಪೂರ್ವನಿಯೋಜಿತವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮನೆಯೊಂದರ ಓಣಿಯೊಳಗೆ ಸಿಲುಕಿಸಿದ ಆರೋಪಿಗಳು, ಮಾರಕಾಸ್ತ್ರಗಳಿಂದ ಆತನ ಮೇಲೆ ನಿರಂತರವಾಗಿ ಹಲ್ಲೆ ನಡೆಸಿದ್ದಾರೆ. ದಾಳಿಯ ತೀವ್ರತೆಗೆ ನರಸಿಂಹನ ಕೈಗಳು ತುಂಡಾಗಿದ್ದು, ಮುಖ ಸಂಪೂರ್ಣ ವಿರೂಪಗೊಂಡ ಕಾರಣ ಆರಂಭದಲ್ಲಿ ಗುರುತು ಪತ್ತೆಹಚ್ಚುವುದೇ ಕಷ್ಟಕರವಾಗಿತ್ತು ಎಂದು ತಿಳಿದುಬಂದಿದೆ.

ತಲೆ, ಕುತ್ತಿಗೆ ಹಾಗೂ ಕೈ ಭಾಗಗಳನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಿಂದ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನಾ ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಹಳೆಯ ವೈಷಮ್ಯವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರಿಯಪ್ಪ ಹಾಗೂ ಕೋಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.