w
Headlines
Home » ಶಿವಮೊಗ್ಗದಲ್ಲಿ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗದಲ್ಲಿ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

1005358139 (2)

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರಿಂದ ನರಸಿಂಹ ಕೊಲೆ ಆರೋಪಿ ಕಾಲಿಗೆ ಗುಂಡೇಟು

Rowdy-sheeter Madhu alias Hanumanthu was shot in the leg by Shivamogga police after allegedly attacking a police constable and attempting to escape during a spot mahazar in the Narasimha murder case.

ಶಿವಮೊಗ್ಗ: ರೌಡಿಶೀಟರ್ ನರಸಿಂಹ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟೆ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದು, ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಪ್ರಮುಖ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ.

ಜೂನ್ 12ರಂದು ನಗರದ ಗಾಂಧಿ ಬಜಾರ್‌ನ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಇಸ್ಪೀಟ್ ಆಟವಾಡಿಸುತ್ತಿದ್ದ ರೌಡಿಶೀಟರ್ ನರಸಿಂಹನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡಿದ್ದ ಪೊಲೀಸರು ಅಂಬು ಅಲಿಯಾಸ್ ಅನಿಲ್, ಮಧು ಅಲಿಯಾಸ್ ಹನುಮಂತು, ರವಿ, ಕತ್ತೆ ಕಾರ್ತಿಕ್ ಹಾಗೂ ಶಬರೀಶ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದರು.

ಭಾನುವಾರ ಮುಂಜಾನೆ ಆರೋಪಿಗಳನ್ನು ಮಹಜರು ನಡೆಸುವ ಉದ್ದೇಶದಿಂದ ಹೊಳೆಬೆನವಳ್ಳಿ ಪ್ರದೇಶಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪ್ರಮುಖ ಆರೋಪಿ ಮಧು ಅಲಿಯಾಸ್ ಹನುಮಂತು ತಪ್ಪಿಸಿಕೊಳ್ಳಲು ಯತ್ನಿಸಿ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಪೊಲೀಸರು ಎಚ್ಚರಿಕೆ ನೀಡಿದರೂ ಆರೋಪಿ ಹಲ್ಲೆ ಮುಂದುವರಿಸಿದ್ದರಿಂದ ಆತ್ಮರಕ್ಷಣೆಗಾಗಿ ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಮಧುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದೇ ವೇಳೆ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಅಂಜನಪ್ಪ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.