Categories: crime news

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

ಕುತ್ತಿಗೆ ಸೀಳಿ ವೃದ್ಧೆ ಹತ್ಯೆ: ಆರೋಪಿಗೆ ಜೀವಾವಧಿ ಶಿಕ್ಷೆ, ₹30 ಸಾವಿರ ದಂಡ

Shivamogga court sentences a 48-year-old man to life imprisonment and imposes a ₹30,000 fine for the 2023 murder of a 60-year-old woman over a property dispute in Suttukote village.

ಶಿವಮೊಗ್ಗ, ಜೂನ್ 25: ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದ ಹನುಮಂತ್ ನಾಯ್ಕ್ (48) ಶಿಕ್ಷೆಗೆ ಗುರಿಯಾದ ಆರೋಪಿ.

ಪ್ರಕರಣದ ವಿವರದಂತೆ, ಆರೋಪಿ ಹನುಮಂತ್ ನಾಯ್ಕ್ ತನ್ನ ಮನೆಯ ಒಂದು ಭಾಗದಲ್ಲಿ ಜ್ಯೋತಿಬಾಯಿ ಎಂಬುವರಿಗೆ ವಾಸಿಸಲು ಅವಕಾಶ ನೀಡಿದ್ದ. ಇದೇ ವೇಳೆ ಆಸ್ತಿ ಹಂಚಿಕೆ ವಿಚಾರದಲ್ಲಿ ರತ್ನಾಬಾಯಿ (60) ತಮ್ಮನ್ನು ಮೋಸಗೊಳಿಸಿದ್ದು ಹಾಗೂ ಗ್ರಾಮಸ್ಥರ ಮುಂದೆ ಅವಮಾನ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಜ್ಯೋತಿಬಾಯಿ ಮತ್ತು ಹನುಮಂತ್ ನಾಯ್ಕ್ ಅವರು ರತ್ನಾಬಾಯಿ ವಿರುದ್ಧ ವೈಷಮ್ಯ ಹೊಂದಿದ್ದರು.

2023ರ ಮಾರ್ಚ್ 15ರಂದು ರಾತ್ರಿ ರತ್ನಾಬಾಯಿ ಅವರು ಹನುಮಂತ್ ನಾಯ್ಕ್ ಮನೆಯ ಮುಂಭಾಗದ ಕಟ್ಟೆಯ ಮೇಲೆ ಮಲಗಿದ್ದ ವೇಳೆ, ಆರೋಪಿ ಚಾಕುವಿನಿಂದ ಅವರ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ಇನ್‌ಸ್ಪೆಕ್ಟರ್ ತಿಪ್ಪೆಸ್ವಾಮಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಅಭಯ್ ಧನಪಾಲ್ ಚೌಗಲ ಅವರು ಆರೋಪದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಜೂನ್ 24ರಂದು ಜೀವಾವಧಿ ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಮಮತಾ ಬಿ.ಎಸ್. ವಾದ ಮಂಡಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ

ರೈತರ ಹೆಸರಿಗೂ ಗೌರವದ ಅಂಕಿತ ಬೇಕು: ‘Fr’ ಸೇರಿಸಲು ಸರ್ಕಾರಕ್ಕೆ ಮನವಿ Kalluru Meghraj urges the Karnataka government…

5 hours ago

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ

ಕುಡಿಯುವ ನೀರಿಗಾಗಿ ಬಾಳೂರು ಗ್ರಾಮಸ್ಥರ ಆಕ್ರೋಶ; ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆ Residents of Baluru and Kaleshwara villages…

6 hours ago

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ

ಬಟಾಣಿಜಡ್ಡು, ತಮ್ಮಡಿಕೊಪ್ಪ ಭಾಗದಲ್ಲಿ ಆನೆಗಳ ಸಂಚಾರ – ತೋಟಗಳಿಗೆ ಹಾನಿ , ಜನರಿಗೆ ಅರಣ್ಯ ಇಲಾಖೆ ಎಚ್ಚರಿಕೆ Wild elephant…

6 hours ago

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ

ಕಾರಿನಲ್ಲಿ ಗಾಂಜಾ ಮಾರಾಟ: ಇಬ್ಬರ ಬಂಧನ, 1.42 ಕೆಜಿ ಗಾಂಜಾ ಹಾಗೂ ಕಾರು ಜಪ್ತಿ Two people were arrested…

12 hours ago

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ

ಎಣ್ಣೆ ಮತ್ತಿನಲ್ಲಿ ಅಪಾಯಕಾರಿ ಆಟೋ ಚಾಲನೆ: ಚಾಲಕನ ಬಂಧನ, ವಾಹನ ಪೊಲೀಸ್ ವಶಕ್ಕೆ Shivamogga West Traffic Police registered…

12 hours ago

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ

ಅರಸಾಳು ಬಳಿ ರೈಲ್ವೆ ಹಳಿಯ ಮೇಲೆ ಉರುಳಿದ ಮರ; ಮಾರ್ಗ ಮಧ್ಯೆ ನಿಂತ ತಾಳಗುಪ್ಪ-ಬೆಂಗಳೂರು ರೈಲು! ಪ್ರಯಾಣಿಕರ ಪರದಾಟ The…

15 hours ago