ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ
A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation.
ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಗ್ರಾಮದ ನಿವಾಸಿ ಪ್ರವೀಣ್ (26) ಎಂದು ಗುರುತಿಸಲಾಗಿದೆ.ಪ್ರವೀಣ್ ಟ್ರಾಕ್ಟರ್ ಬಾಡಿಗೆ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಗುರುವಾರ ರಾತ್ರಿ ಎಂದಿನಂತೆ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ತಲೆ ಭಾಗಕ್ಕೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಮೃತ ಪ್ರವೀಣ್ ಅವರು ಕೆಲವು ಯುವಕರಿಗೆ ಕೆಲಸದ ನಿಮಿತ್ತ ಬೆಳಿಗ್ಗೆ ಮನೆಗೆ ಬರಲು ಸೂಚಿಸಿದ್ದರೆಂದು ತಿಳಿದುಬಂದಿದೆ. ಅದರಂತೆ ಶುಕ್ರವಾರ ಬೆಳಗ್ಗೆ ಅವರು ಹಲವು ಬಾರಿ ಕರೆ ಮಾಡಿದರೂ ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ತೆರಳಿ ಪರಿಶೀಲಿಸಿದಾಗ ಹತ್ಯೆ ನಡೆದಿರುವುದು ಪತ್ತೆಯಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ ವ್ಯವಹಾರಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದ್ದು, ಮಾಹಿತಿ ತಿಳಿದ ತಕ್ಷಣ ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…