Categories: crime news

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

ಒಂದೇ ದಿನ 70 ವಾಹನಗಳು ಪೊಲೀಸರ ವಶಕ್ಕೆ! ಕಾರಣ ಕೇಳಿದ್ರೆ ಅಚ್ಚರಿ! ; ವಿಶೇಷ ಕಾರ್ಯಾಚರಣೆಯಲ್ಲಿ ಪೊಲೀಸರ ಬಿಗಿ ಕ್ರಮ

Shivamogga Traffic Police seized 70 vehicles without number plates during a special enforcement drive and registered cases under CMV Rule 50(3) and IMV Act Section 177.

ಶಿವಮೊಗ್ಗ: ಇ-ಚಲನ್‌ನಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನಗಳ ನೋಂದಣಿ ಸಂಖ್ಯೆ (ನಂಬರ್ ಪ್ಲೇಟ್) ಫಲಕಗಳನ್ನು ತೆಗೆದು ಸಂಚರಿಸುತ್ತಿದ್ದ ವಾಹನ ಸವಾರರ ವಿರುದ್ಧ ಶಿವಮೊಗ್ಗ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿದ್ದ ಸುಮಾರು 70 ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಸೋಮವಾರ ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ, ನಂಬರ್ ಪ್ಲೇಟ್ ಇಲ್ಲದೆ ರಸ್ತೆಗಿಳಿದಿದ್ದ ದ್ವಿಚಕ್ರ ಹಾಗೂ ಇತರೆ ವಾಹನಗಳನ್ನು ತಡೆದು ಪರಿಶೀಲನೆ ನಡೆಸಲಾಯಿತು. ಈ ವೇಳೆ ಸುಮಾರು 70 ವಾಹನಗಳು ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದ್ದು, ಅವುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ವಾಹನಗಳ ವಿರುದ್ಧ ಕೇಂದ್ರ ಮೋಟಾರು ವಾಹನ ನಿಯಮಗಳು, 1988ರ ನಿಯಮ 50(3) (CMV Rule 50(3)) ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆಯ ಕಲಂ 177 (IMV Act Section 177) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಂಚಾರಿ ಪೊಲೀಸ್ ಠಾಣೆಗೆ ಖುದ್ದಾಗಿ ಭೇಟಿ ನೀಡಿದ ಎಸ್​ಪಿ ನಿಖಿಲ್ ಬಿ. ಅವರು ಬೈಕ್ ಮಾಲೀಕರಿಗೆ ಕಠಿಣ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಹನ ಸವಾರರು ಕಡ್ಡಾಯವಾಗಿ ಮುಂಭಾಗ ಹಾಗೂ ಹಿಂಭಾಗ ಎರಡೂ ಕಡೆ ನಂಬರ್ ಪ್ಲೇಟ್ ಅಳವಡಿಸಿಕೊಂಡೇ ಚಲಿಸಬೇಕು. ಇನ್ನೊಮ್ಮೆ ಇಂತಹ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ, ಅಂತಹ ಸವಾರರ ಮೇಲೆ ನೇರವಾಗಿ ಎಫ್‌ಐಆರ್  ದಾಖಲಿಸಿ ಎಂದು ಸಂಚಾರಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ

ಪ್ಲಾಸ್ಟಿಕ್ ಚೀಲಗಳ ನಡುವೆ ಅಡಗಿದ್ದ 7.5 ಅಡಿ ಬೃಹತ್ ಹೆಬ್ಬಾವು ಸೆರೆ A 7.5-foot-long, 10 kg giant python…

1 hour ago

ಈದ್ ಮಿಲಾದ್ – ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್ ವಾರ್ನಿಂಗ್

ಈದ್ ಮಿಲಾದ್ - ಗಣೇಶೋತ್ಸವಕ್ಕೆ ಅನುಮತಿ ಇಲ್ಲದೆ ಡಿಜೆ ಹಾಕಿದರೆ ಕೇಸ್ ! ಸೌಂಡ್ ಸಿಸ್ಟಂ ಮಾಲೀಕರಿಗೆ ಪೊಲೀಸರಿಂದ ಖಡಕ್…

2 hours ago

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು

ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು Sagar Tahsildar Dr. Prathibha…

9 hours ago

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು

ಗೋಡಾನ್ ಜಾಲರಿ ಮುರಿದು ಅಡಕೆ ಕಳವು; ₹2.50 ಲಕ್ಷ ಮೌಲ್ಯದ 4.80 ಕ್ವಿಂಟಾಲ್ ಅಡಕೆ ದೋಚಿದ ಕಳ್ಳರು Thieves broke…

9 hours ago

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ

ಮನೆಯಲ್ಲಿ ಒಬ್ಬರೇ ಇದ್ದ ಮಹಿಳೆ ಮೇಲೆ ಹಲ್ಲೆ; ಬಂಗಾರದ ಸರ ಕಿತ್ತುಕೊಂಡು ದುಷ್ಕರ್ಮಿ ಪರಾರಿ A woman was allegedly…

10 hours ago

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಬರುವೆ ಶಾಲೆಯ ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ

30 ವರ್ಷ 8 ತಿಂಗಳ ಸಾರ್ಥಕ ಸೇವೆಗೆ ವಿರಾಮ: ಶಿಕ್ಷಕಿ ಅಂಬಿಕಾ ಸಿ. ಅವರಿಗೆ ಆತ್ಮೀಯ ಬೀಳ್ಕೊಡುಗೆ Teacher Ambika…

21 hours ago