w
Headlines
Home » ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

GridArt 20260606

ಕ್ರೇನ್‌ಗೆ ಸಿಲುಕಿ ಕಾರ್ಮಿಕ ದುರ್ಮರಣ: ಶಿವಮೊಗ್ಗದಲ್ಲಿ ಕಾಮಗಾರಿ ವೇಳೆ ದುರಂತ

A 45-year-old construction worker from Belthangady died after getting trapped in a crane during temple construction work near Doddamma Temple in Shivamogga. Police have registered a case and launched an investigation.

ಶಿವಮೊಗ್ಗ: ನಗರದ ದೊಡ್ಡಮ್ಮ ದೇವಸ್ಥಾನದ ಸಮೀಪ ನಡೆಯುತ್ತಿದ್ದ ಕಾಮಗಾರಿ ವೇಳೆ ಕ್ರೇನ್‌ಗೆ ಸಿಲುಕಿ ಕಾರ್ಮಿಕನೊಬ್ಬ ಮೃತಪಟ್ಟ ದುರ್ಘಟನೆ ಶುಕ್ರವಾರ ಸಂಭವಿಸಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪೀಳಿಗುಡಿ ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಮಾಹಿತಿಯ ಪ್ರಕಾರ, ನಾಗೇಶ್ ಅವರು ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ನಿನ್ನೆ ಶಿವಮೊಗ್ಗಕ್ಕೆ ಆಗಮಿಸಿದ್ದರು. ಇಂದು ಬೆಳಿಗ್ಗೆ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕ್ರೇನ್‌ಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.