ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road.

ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ ಮರ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ತಾಲೂಕಿನ ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ–ಬಾಳಗಾರು ಸಂಪರ್ಕ ರಸ್ತೆಯಲ್ಲಿ ನಡೆದಿದೆ.

ಗಾಂಧಿನಗರ ನಿವಾಸಿ, ಕಲ್ಲು ವ್ಯಾಪಾರಿ ಮಾಯಕಣ್ಣನ್ (61) ಮೃತ ದುರ್ದೈವಿ. ಅವರು ತೀರ್ಥಹಳ್ಳಿ ಸಮೀಪದ ಕಲ್ಲತ್ತಿಯಲ್ಲಿರುವ ಮನೆಯೊಂದಕ್ಕೆ ಪೂರೈಸಿದ್ದ ಕಲ್ಲಿನ ಹಣವನ್ನು ಪಡೆದು ತಮ್ಮ ಬೈಕ್‌ನಲ್ಲಿ ಮನೆಗೆ ಮರಳುತ್ತಿದ್ದರು.

ಈ ವೇಳೆ ರಸ್ತೆ ಪಕ್ಕದ ಅಬ್ಬಿಗದ್ದೆ ತೋಟದಲ್ಲಿ ಕಾರ್ಮಿಕರು ಒಣಗಿದ ಹಾಗೂ ಹಳೆಯ ಅಡಕೆ ಮರಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಕಡಿಯಲಾಗುತ್ತಿದ್ದ ಒಣ ಅಡಕೆ ಮರಗಳಲ್ಲಿ ಒಂದು ಏಕಾಏಕಿ ರಸ್ತೆ ಕಡೆಗೆ ಬಿದ್ದಿದೆ.

ಅದೇ ಸಮಯದಲ್ಲಿ ಅಲ್ಲಿಂದ ಬೈಕ್‌ನಲ್ಲಿ ಸಾಗುತ್ತಿದ್ದ ಮಾಯಕಣ್ಣನ್ ಅವರ ತಲೆಯ ಮೇಲೆ ಮರ ನೇರವಾಗಿ ಬಿದ್ದ ಪರಿಣಾಮ ಅವರಿಗೆ ತೀವ್ರ ತಲೆಗಾಯವಾಗಿದೆ.

ಮರ ಬಿದ್ದ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಿಂದ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

18 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

18 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

22 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago