w
Headlines
Home » ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

GridArt 20260605

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026.

ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಿದೆ ಎಂದು ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರುಗೇಂದ್ರ ಬಿ. ಶಿರೋಳ್ಕರ್ ತಿಳಿಸಿದ್ದಾರೆ.

ಸಾರಿಗೆ ಇಲಾಖೆಯ ಅಧೀನದಲ್ಲಿ 1991ರಿಂದ 2022ರವರೆಗೆ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳು ದಾಖಲಿಸಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ.

ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಈ ಅವಧಿಗೆ ಸಂಬಂಧಿಸಿದ ಒಟ್ಟು 790 ಪ್ರಕರಣಗಳು ಇನ್ನೂ ಇತ್ಯರ್ಥಗೊಳ್ಳದೆ ಬಾಕಿ ಉಳಿದಿವೆ. ಅರ್ಹ ವಾಹನ ಮಾಲೀಕರು ಈ ಸೌಲಭ್ಯದ ಪ್ರಯೋಜನ ಪಡೆದು ತಮ್ಮ ಪ್ರಕರಣಗಳನ್ನು ಮುಕ್ತಾಯಗೊಳಿಸಿಕೊಳ್ಳಬಹುದು.
ದಂಡ ಪಾವತಿಗೆ ನಿಗದಿಪಡಿಸಿರುವ ವಿಶೇಷ ರಿಯಾಯಿತಿ ಅವಧಿಯು ಜೂನ್ 21, 2026ರಿಂದ ಜುಲೈ 10, 2026ರವರೆಗೆ ಇರಲಿದೆ. ಈ ಅವಧಿಯಲ್ಲಿ ವಾಹನ ಮಾಲೀಕರು ಶೇಕಡಾ 50 ರಷ್ಟು ದಂಡ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನಿಗದಿತ ಅವಧಿಯೊಳಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಾಹನ ಮಾಲೀಕರಿಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಮನವಿ ಮಾಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.