Categories: crime news

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿದ್ದ ಇಬ್ಬರು ಕಿಶೋರ ಕಾರ್ಮಿಕರ ರಕ್ಷಣೆ – ಮಾಲೀಕರಿಗೆ ಎಚ್ಚರಿಕೆ

Two adolescent laborers were rescued from a construction site in Shiralkoppa, Shivamogga, in a joint operation. Authorities warn owners of strict legal action, including fines and imprisonment, under the Child Labour Act.

ಶಿವಮೊಗ್ಗ ಜೂ, 23: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಕ್ರಷರ್ ಹತ್ತಿರದ ಗಣಿ ಪ್ರದೇಶದಲ್ಲಿ ಕಿಶೋರ ಕಾರ್ಮಿಕರು ಕೆಲಸ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ ಜಂಟಿಯಾಗಿ ದಾಳಿ ನಡೆಸಿ, ಇಬ್ಬರು ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದಾರೆ.

ದಿನಾಂಕ 22-06-2026 ರಂದು ನಡೆದ ಈ ಜಂಟಿ ಕಾರ್ಯಾಚರಣೆಯಲ್ಲಿ, ಮನೆಯೊಂದರ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಇಬ್ಬರು ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಿ, ಆ ಪ್ರದೇಶದಿಂದ ಮುಕ್ತಗೊಳಿಸಲಾಗಿದೆ. ತದನಂತರ ರಕ್ಷಿಸಲ್ಪಟ್ಟ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಇದೇ ವೇಳೆ, ನಿಯಮ ಉಲ್ಲಂಘಿಸಿದ ಮಾಲೀಕರಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಅಧಿಕಾರಿಗಳು ಕಾನೂನು ಅರಿವು ಮೂಡಿಸಿದ್ದಾರೆ.

ಕಾನೂನು ಕ್ರಮದ ಎಚ್ಚರಿಕೆ:

ಪ್ರಸ್ತುತ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರ ಉದ್ಯಮಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ಯಮಗಳಲ್ಲಿ ಕೆಲಸಕ್ಕೆ ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ.

ಒಂದು ವೇಳೆ ನಿಯಮ ಮೀರಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ, ಮಾಲೀಕರ ವಿರುದ್ಧ ಬಾಲಕಾರ್ಮಿಕ ಕಾಯ್ದೆಯಡಿ ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು. ಜೊತೆಗೆ ₹50,000 ವರೆಗೆ ದಂಡ ಅಥವಾ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ಕಾಡುಪ್ರಾಣಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ A car crashed into…

13 hours ago

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ

ರಿಪ್ಪನ್‌ಪೇಟೆಯಲ್ಲಿ 59ನೇ ಗಣೇಶೋತ್ಸವಕ್ಕೆ ಭರದ ಸಿದ್ದತೆ : ಸೆ.14ರಿಂದ 11 ದಿನಗಳ ಸಾಂಸ್ಕೃತಿಕ ಸಂಭ್ರಮ Rippanpete Ganeshotsava 2026: Karnataka…

14 hours ago

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ

ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…

14 hours ago

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

1 day ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

2 days ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

2 days ago